ಪುತ್ತೂರು: ಗೋವುಗಳನ್ನು ಹಿಂಸಾತ್ಮಕ ರೀತಿಯಲ್ಲಿ ಅಕ್ರಮವಾಗಿ ಕೇರಳಕ್ಕೆ ಸಾಗಿಸುತ್ತಿದ್ದ ವಾಹನವನ್ನು ಸಂಪ್ಯ ಗ್ರಾಮಾಂತರ ಠಾಣೆ ಪೊಲೀಸರು ಪತ್ತೆಹಚ್ಚಿ 11 ಗೋವುಗಳನ್ನು ರಕ್ಷಿಸಿದ್ದಾರೆ. ಈ ಸಂಬಂಧ ಓರ್ವನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಕಾರ್ಯಾಚರಣೆ ವೇಳೆ ಇಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ.ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳದ ಕಾರ್ಯಕರ್ತರಿಂದ ಪೊಲೀಸರಿಗೆ ದೊರೆತ ಮಾಹಿತಿಯ ಆಧಾರದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ ಎನ್ನಲಾಗಿದೆ.ಪುತ್ತೂರು ತಾಲೂಕಿನ ಕುಂಜೂರುಪಂಜ ದೇವಶ್ಯದಲ್ಲಿರುವ ಮಯ್ಯ ಫಾರ್ಮ್‌ನಿಂದ ಸೋಮವಾರ ಮುಂಜಾನೆ ಸುಮಾರು 3 ಗಂಟೆಗೆ ಬುಳೇರಿಕಟ್ಟೆ ಮಾರ್ಗವಾಗಿ ಗೋವುಗಳನ್ನು ಕೇರಳದತ್ತ ಸಾಗಿಸಲಾಗುತ್ತಿತ್ತು ಎನ್ನಲಾಗಿದೆ. ಗೋವುಗಳ ಕೈಕಾಲುಗಳನ್ನು ಕಟ್ಟಿ ಹಿಂಸಾತ್ಮಕ ರೀತಿಯಲ್ಲಿ ವಾಹನದಲ್ಲಿ ತುಂಬಿಸಿಕೊಂಡು ಸಾಗಿಸಲಾಗುತ್ತಿತ್ತು ಎಂದು ಆರೋಪಿಸಲಾಗಿದೆ.ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ ಪೊಲೀಸರು ಗೋವುಗಳನ್ನು ಸಾಗಿಸುತ್ತಿದ್ದ ವಾಹನವನ್ನು ಪತ್ತೆಹಚ್ಚಿ 11 ಗೋವುಗಳನ್ನು ರಕ್ಷಿಸಿದ್ದಾರೆ. ಪೊಲೀಸರು ಸ್ಥಳಕ್ಕೆ ಆಗಮಿಸುತ್ತಿದ್ದಂತೆ ವಾಹನದಲ್ಲಿದ್ದ ಇಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ. ಅವರ ಪತ್ತೆಗೆ ಶೋಧ ಕಾರ್ಯ ಮುಂದುವರಿದಿದೆ.ಈ ಕುರಿತು ಸಂಪ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!