ಪುತ್ತೂರು: ತಾಲೂಕಿನ ಬುಳೇರಿಕಟ್ಟೆ ಬಳಿ ಪಿಕಪ್ ವಾಹನದಲ್ಲಿ ಹಿಂಸಾತ್ಮಕ ರೀತಿಯಲ್ಲಿ ಗೋವುಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಪುತ್ತೂರು ಗ್ರಾಮಾಂತರ ಠಾಣೆ ಪೊಲೀಸರು ಪತ್ತೆಹಚ್ಚಿ, ವಾಹನವನ್ನು ವಶಕ್ಕೆ ಪಡೆದು ಗೋವುಗಳನ್ನು ರಕ್ಷಿಸಿರುವ ಘಟನೆ ಸೋಮವಾರ ಮುಂಜಾನೆ ನಡೆದಿದೆ.ಬಜರಂಗದಳದ ಕಾರ್ಯಕರ್ತರು ನೀಡಿದ ಮಾಹಿತಿಯ ಆಧಾರದ ಮೇಲೆ ಪೊಲೀಸರು ತಕ್ಷಣ ಕಾರ್ಯಾಚರಣೆ ನಡೆಸಿ ಗೋವುಗಳನ್ನು ರಕ್ಷಿಸಿದ್ದಾರೆ. ಈ ಕಾರ್ಯಾಚರಣೆಗೆ ಪೊಲೀಸ್ ಇಲಾಖೆಯ ಕರ್ತವ್ಯಪ್ರಜ್ಞೆಯನ್ನು ಶ್ಲಾಘಿಸಲಾಗಿದೆ.ಆದರೆ ಪ್ರಕರಣವನ್ನು ಕೇವಲ ವಾಹನ ವಶಪಡಿಸಿಕೊಳ್ಳುವುದಕ್ಕೆ ಸೀಮಿತಗೊಳಿಸದೆ, ಇದರ ಹಿಂದೆ ಇರುವ ವ್ಯವಸ್ಥಿತ ಜಾಲವನ್ನು ಪತ್ತೆಹಚ್ಚಲು ನಿಷ್ಪಕ್ಷಪಾತ ಹಾಗೂ ಸಮಗ್ರ ತನಿಖೆ ನಡೆಸಬೇಕು ಎಂದು ಆಗ್ರಹಿಸಲಾಗಿದೆ.ಗೋವುಗಳನ್ನು ಎಲ್ಲಿಂದ ತರಲಾಗಿತ್ತು, ಅವುಗಳನ್ನು ಸಂಗ್ರಹಿಸಿದವರು ಯಾರು, ಸಾಗಾಟಕ್ಕೆ ವಾಹನ ವ್ಯವಸ್ಥೆ ಮಾಡಿದವರು ಯಾರು, ಗೋವುಗಳನ್ನು ಎಲ್ಲಿಗೆ ಸಾಗಿಸಲಾಗುತ್ತಿತ್ತು ಹಾಗೂ ಈ ದಂಧೆಯ ಹಿಂದೆ ಹಣಕಾಸು ನೆರವು ನೀಡುತ್ತಿರುವವರು ಯಾರು ಎಂಬುದರ ಕುರಿತು ಆಳವಾದ ತನಿಖೆ ನಡೆಸಬೇಕು ಎಂದು ಒತ್ತಾಯಿಸಲಾಗಿದೆ.

ಘಟನಾ ಸ್ಥಳದಿಂದ ಪರಾರಿಯಾಗಿರುವ ವಾಹನದ ಚಾಲಕನನ್ನು ಕೂಡಲೇ ಪತ್ತೆಹಚ್ಚಿ ಬಂಧಿಸಬೇಕು. ಗೋವುಗಳ ಸಂಗ್ರಹ, ಸಾಗಾಟ ಸೇರಿದಂತೆ ದಂಧೆಯಲ್ಲಿ ಭಾಗಿಯಾಗಿರುವ ಸಂಪೂರ್ಣ ಸರಪಳಿಯನ್ನು ಪತ್ತೆಹಚ್ಚಿ, ತಪ್ಪಿತಸ್ಥರ ವಿರುದ್ಧ ಯಾವುದೇ ಒತ್ತಡಕ್ಕೆ ಮಣಿಯದೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಲಾಗಿದೆ.ಅಕ್ರಮ ಗೋಸಾಗಾಟದ ಮೂಲ ಬೇರನ್ನು ಪತ್ತೆಹಚ್ಚಿ, ಇಡೀ ಜಾಲವನ್ನು ಕಾನೂನಿನ ಮುಂದೆ ತಂದು ನಿಲ್ಲಿಸಬೇಕು. ಪ್ರಕರಣವನ್ನು ಕೇವಲ ಒಂದು ವಾಹನದ ವಶಪಡಿಸಿಕೊಳ್ಳುವಿಕೆಗೆ ಸೀಮಿತಗೊಳಿಸಬಾರದು ಎಂದು puttur ಬಿಜೆಪಿ ಪ್ರಕಟಣೆಯಲ್ಲಿ ಒತ್ತಾಯಿಸಲಾಗಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!