ಮಂಗಳೂರು: ದಸರಾ ಹಬ್ಬದ ಪ್ರಯುಕ್ತ ಹುಲಿ ವೇಷ ತರಬೇತಿಗಾಗಿ ಮಂಗಳೂರಿಗೆ ಬಂದಿದ್ದ ಬೆಳ್ತಂಗಡಿ ತಾಲೂಕಿನ 14 ವರ್ಷದ ಬಾಲಕನೊಬ್ಬ ಸಮುದ್ರದಲ್ಲಿ ಮುಳುಗಿ ನಾಪತ್ತೆಯಾಗಿರುವ ಘಟನೆ ನಡೆದಿದೆ.ಬೆಳ್ತಂಗಡಿ ತಾಲೂಕಿನ ರೆಂಕೆದ ಗುತ್ತು, ಕಸಬಾ ಗ್ರಾಮದ ಶ್ರೇಯಸ್ ಎಸ್. ಕುಂಬಾರ (14) ನಾಪತ್ತೆಯಾದ ಬಾಲಕ.ಅ.4ರಂದು ಬೆಳಿಗ್ಗೆ ಸುಮಾರು 10 ಗಂಟೆಗೆ ಶ್ರೇಯಸ್ ತನ್ನ ನಾಲ್ವರು ಅಪ್ರಾಪ್ತ ಸ್ನೇಹಿತರೊಂದಿಗೆ ದಸರಾ ಹಬ್ಬದ ಹಿನ್ನೆಲೆಯಲ್ಲಿ ಹುಲಿ ವೇಷ ಹಾಕುವ ತರಬೇತಿಗಾಗಿ ಮಂಗಳೂರಿಗೆ ಬಂದಿದ್ದ. ತರಬೇತಿ ಮುಗಿದ ಬಳಿಕ ಸ್ಟೇಟ್‌ಬ್ಯಾಂಕ್‌ನಿಂದ ಪಣಂಬೂರು ಬೀಚ್‌ಗೆ ತೆರಳಿದ್ದ ಅವರು, ಸಂಜೆ 4.30ರಿಂದ 5 ಗಂಟೆ ಸುಮಾರಿಗೆ ಕೂರಿಕಟ್ಟ ಸಮುದ್ರ ಕಿನಾರೆಗೆ ತೆರಳಿದ್ದರು.ಸಂಜೆ ಸುಮಾರು 6 ಗಂಟೆಗೆ ಸಮುದ್ರದಲ್ಲಿ ಆಟವಾಡುತ್ತಿದ್ದ ವೇಳೆ ಶ್ರೇಯಸ್ ನೀರಿನಲ್ಲಿ ಮುಳುಗಿದ್ದು, ಅಲೆಗಳ ರಭಸಕ್ಕೆ ಕೊಚ್ಚಿಕೊಂಡು ಹೋಗಿದ್ದಾನೆ ಎನ್ನಲಾಗಿದೆ.ಘಟನೆ ಬಳಿಕ ಭಯಗೊಂಡಿದ್ದ ಆತನ ಅಪ್ರಾಪ್ತ ಸ್ನೇಹಿತರು ಶ್ರೇಯಸ್ ನಾಪತ್ತೆಯಾಗಿರುವ ವಿಚಾರವನ್ನು ಮನೆಯವರಿಗೆ ತಿಳಿಸಿರಲಿಲ್ಲ. ಅ.5ರಂದು ಬೆಳಗ್ಗೆ ಈ ವಿಷಯ ಶ್ರೇಯಸ್ ಮನೆಯವರಿಗೆ ತಿಳಿದಿದೆ.ಬಾಲಕನ ತಂದೆ ಶೇಷಪ್ಪ ನೀಡಿದ ದೂರಿನ ಮೇರೆಗೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ಅ.ಕ್ರ. 127/2026ರಂತೆ ಮನುಷ್ಯ ಕಾಣೆ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.ಪತ್ತೆ ಕಾರ್ಯ ಚುರುಕುನಾಪತ್ತೆಯಾಗಿರುವ ಬಾಲಕನ ಪತ್ತೆಗಾಗಿ ಕೋಸ್ಟ್ ಗಾರ್ಡ್, ಕರಾವಳಿ ಕಾವಲು ಪಡೆ ಹಾಗೂ ಸಮುದ್ರ ವ್ಯಾಪ್ತಿ ಹೊಂದಿರುವ ಪೊಲೀಸ್ ಠಾಣೆಗಳಿಗೆ ಮಾಹಿತಿ ನೀಡಲಾಗಿದೆ. ಲೈಫ್‌ಗಾರ್ಡ್‌ಗಳು, ಮುಳುಗು ತಜ್ಞರು ಹಾಗೂ ಸ್ಥಳೀಯ ಮೀನುಗಾರರ ಸಹಕಾರದೊಂದಿಗೆ ಸಮುದ್ರದಲ್ಲಿ ಶೋಧ ಕಾರ್ಯ ಮುಂದುವರಿದಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!