ಪುತ್ತೂರು : ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು ಹಾಗೂ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಸಂಯುಕ್ತ ಆಶ್ರಯದಲ್ಲಿ ನಡೆದ ಪುತ್ತೂರು ವಲಯ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಬೆಥನಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಗಮನಾರ್ಹ ಸಾಧನೆ ಮಾಡಿದ್ದಾರೆ.14ರ ವಯೋಮಾನದ ವಿಭಾಗದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ವಿದ್ಯಾರ್ಥಿಗಳು ಪ್ರಶಸ್ತಿ ಗಳಿಸಿದ್ದು, ಬಾಲಕರ ತಂಡವು ಒಟ್ಟಾರೆ ಚಾಂಪಿಯನ್‌ಶಿಪ್‌ನಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿದೆ.ಜೆರೂಷಾ ಡಿ’ಅಲ್ಮೇಡಾ ಗುಂಡು ಎಸೆತ ಹಾಗೂ ಡಿಸ್ಕಸ್ ಎಸೆತದಲ್ಲಿ ಪ್ರಥಮ ಸ್ಥಾನ ಪಡೆದರೆ, ಅಬ್ದುಲ್ ಆರ್. ಜಹಾಷ್ ಗುಂಡು ಎಸೆತದಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾರೆ. ಪುಲಸ್ತ್ಯ ಡಿಸ್ಕಸ್ ಎಸೆತದಲ್ಲಿ ದ್ವಿತೀಯ ಹಾಗೂ ವಿನ್ಯಾ ತೃತೀಯ ಸ್ಥಾನ ಪಡೆದಿದ್ದಾರೆ. ಹಜೀಮ್ ಎತ್ತರ ಜಿಗಿತದಲ್ಲಿ ದ್ವಿತೀಯ ಹಾಗೂ ಹಲೀಮ ಲಿನ ತೃತೀಯ ಸ್ಥಾನ ಪಡೆದಿದ್ದಾರೆ.ಬಾಲಕರ ರಿಲೇ ತಂಡದಲ್ಲಿ ಅಬ್ದುಲ್ ಆರ್. ಜಹಾಷ್, ಪುಲಸ್ತ್ಯ, ಮಹಮ್ಮದ್ ಹೂದ್ ಹಾಗೂ ಅಬ್ದುಲ್ ಸವಾನ್ ದ್ವಿತೀಯ ಸ್ಥಾನ ಪಡೆದರೆ, ಬಾಲಕಿಯರ ರಿಲೇ ತಂಡದ ಶ್ರುತ, ಇಶಾನಿ, ಸಮನ್ವಿ ಹಾಗೂ ಹಲೀಮ ಲಿನ ತೃತೀಯ ಸ್ಥಾನ ಗಳಿಸಿದ್ದಾರೆ.17ರ ವಯೋಮಾನದ ವಿಭಾಗದಲ್ಲಿ ಮೊಹಮ್ಮದ್ ಅಕ್ಮಲ್ ಗುಂಡು ಎಸೆತದಲ್ಲಿ ಪ್ರಥಮ ಹಾಗೂ ಮೊಹಮ್ಮದ್ ಇಹ್ಸಾನ್ ಎತ್ತರ ಜಿಗಿತದಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ.ವಿದ್ಯಾರ್ಥಿಗಳಿಗೆ ಶಾಲಾ ಪ್ರಾಂಶುಪಾಲರಾದ ಭಗಿನಿ ಅನಿತಾ ಟ್ರೆಸ್ಸಿ ಮಾರ್ಗದರ್ಶನ ನೀಡಿದ್ದು, ದೈಹಿಕ ಶಿಕ್ಷಣ ಶಿಕ್ಷಕರಾದ ನಿರಂಜನ್ ಹಾಗೂ ಅಕ್ಷಯ್ ತರಬೇತಿ ನೀಡಿದ್ದಾರೆ.ವಿಜೇತ ವಿದ್ಯಾರ್ಥಿಗಳನ್ನು ಶಾಲಾ ಆಡಳಿತ ಮಂಡಳಿ, ಪ್ರಾಂಶುಪಾಲರು, ಶಿಕ್ಷಕ-ರಕ್ಷಕ ಸಂಘ ಹಾಗೂ ಶಿಕ್ಷಕ ವೃಂದ ಅಭಿನಂದಿಸಿದ್ದಾರೆ.











