ವಿಟ್ಲ: ಬ್ಯಾಂಕ್‌ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಇಬ್ಬರಿಂದ ಹಣ ಪಡೆದು, ಉದ್ಯೋಗ ಕೊಡಿಸದೆ ಹಣವನ್ನೂ ಹಿಂದಿರುಗಿಸದೆ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ಸುಮಾರು 15 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.ಪುತ್ತೂರು ಬಲ್ಯ ನಿವಾಸಿ ಹಿಬ್ಬಾತುಲ್ಲ (52) ಬಂಧಿತ ಆರೋಪಿ. ಈತನ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ. 151/2011ರಲ್ಲಿ ಐಪಿಸಿ ಕಲಂ 420, 465, 468, 471 ಜೊತೆಗೆ 34ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.ಪ್ರಕರಣದ ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಗದೆ ಸುಮಾರು 15 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಹಿಬ್ಬಾತುಲ್ಲನನ್ನು ಅ.5ರಂದು ವಿಟ್ಲ ಠಾಣಾ ಸಿಬ್ಬಂದಿಗಳಾದ ಶಿವಾನಂದ ಮಡ್ಡಿ, ಸಿದ್ದಪ್ಪ ಹಾಗೂ ಯಂಕಪ್ಪ ಅವರು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದರು.ವಿಚಾರಣೆ ನಡೆಸಿದ ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!