ಸುಳ್ಯ: ಸುಳ್ಯ ಬಿಜೆಪಿ ಶಾಸಕಿ ಭಾಗೀರಥಿ ಮುರುಳ್ಯ ಪ್ರಯಾಣಿಸುತ್ತಿದ್ದ ಕಾರು ಮತ್ತೊಂದು ಕಾರಿಗೆ ಡಿಕ್ಕಿಯಾಗಿ ಅಪಘಾತಕ್ಕೀಡಾದ ಘಟನೆ ಮಂಗಳವಾರ ಸುಳ್ಯ ತಾಲೂಕಿನ ಕರಿಕ್ಕಳ–ನಿಂತಿಕಲ್ ಮಾರ್ಗ ಮಧ್ಯೆ ನಡೆದಿದೆ.ಮುಂದೆ ಸಾಗುತ್ತಿದ್ದ ಕಾರಿನ ಚಾಲಕ ಏಕಾಏಕಿ ಬ್ರೇಕ್ ಹಾಕಿದ ಪರಿಣಾಮ, ಹಿಂಬದಿಯಿಂದ ಬರುತ್ತಿದ್ದ ಶಾಸಕಿ ಭಾಗೀರಥಿ ಮುರುಳ್ಯ ಅವರ ಇನ್ನೋವಾ ಕಾರು ಮುಂದಿನ ಕಾರಿಗೆ ಡಿಕ್ಕಿಯಾಗಿದೆ ಎನ್ನಲಾಗಿದೆ.ಅಪಘಾತದ ಪರಿಣಾಮ ಇನ್ನೋವಾ ಕಾರಿನ ಮುಂಭಾಗ ಜಖಂಗೊಂಡಿದ್ದು, ಅದೃಷ್ಟವಶಾತ್ ಶಾಸಕಿ ಭಾಗೀರಥಿ ಮುರುಳ್ಯ ಹಾಗೂ ಕಾರು ಚಾಲಕ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ. ಘಟನೆಯಲ್ಲಿ ಹೆಚ್ಚಿನ ಅನಾಹುತ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.











