ಉಪ್ಪಿನಂಗಡಿ: ಅಕ್ರಮ ಮರಳು ಸಾಗಾಟ ಪ್ರಕರಣಕ್ಕೆ ಸಂಬಂಧಿಸಿ ಸುಮಾರು ಎರಡು ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ಹಾಸನದಲ್ಲಿ ಪತ್ತೆಹಚ್ಚಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.ಉಪ್ಪಿನಂಗಡಿ ಪೊಲೀಸ್ ಠಾಣೆಯ ಪಿ.ಸಿ.ಆರ್. ಸಂಖ್ಯೆ 01/2018ರ ಪ್ರಕರಣದಲ್ಲಿ ಆರೋಪಿಯಾಗಿದ್ದ ಹಾಸನ ಜಿಲ್ಲೆಯ ಬೇಲೂರು ನಿವಾಸಿ ವಿಶ್ವ ಎಂಬಾತನು ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದನು.ನ್ಯಾಯಾಲಯದ ವಾರೆಂಟ್‌ನಂತೆ ಕಾರ್ಯಾಚರಣೆ ನಡೆಸಿದ ಉಪ್ಪಿನಂಗಡಿ ಪೊಲೀಸ್ ಠಾಣೆಯ ಸಿಬ್ಬಂದಿ ಪಿ.ಸಿ. 2295 ಪ್ರವೀಣ್ ಹಾಗೂ ಪಿ.ಸಿ. ಲಿಂಗರಾಜು ಅವರು ಅ.6ರಂದು ಹಾಸನದಲ್ಲಿ ಆರೋಪಿಯನ್ನು ಪತ್ತೆಹಚ್ಚಿ ವಶಕ್ಕೆ ಪಡೆದು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.











