ಬೆಂಗಳೂರು: ರಾಜ್ಯದಲ್ಲಿ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಚುನಾವಣೆ ನಡೆಸುವ ಕುರಿತು ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ ಎನ್ನಲಾಗಿದೆ. ಜನವರಿ ಮೊದಲ ವಾರದಲ್ಲೇ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಚುನಾವಣೆ ನಡೆಸಲು ಸಚಿವ ಸಂಪುಟ ಒಲವು ತೋರಿದೆ.ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ಕುರಿತು ಸುದೀರ್ಘ ಚರ್ಚೆ ನಡೆದಿದ್ದು, ಮೊದಲ ಹಂತದಲ್ಲಿ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಚುನಾವಣೆ ನಡೆಸಿ, ಬಳಿಕ ಗ್ರಾಮ ಪಂಚಾಯಿತಿ ಚುನಾವಣೆ ನಡೆಸುವ ಕುರಿತು ಸರ್ಕಾರ ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ.
ಈ ನಿರ್ಧಾರದಿಂದ ರಾಜ್ಯದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಚುನಾವಣೆ ದಿನಾಂಕ, ವೇಳಾಪಟ್ಟಿ ಹಾಗೂ ಇತರ ಪ್ರಕ್ರಿಯೆಗಳ ಕುರಿತು ಮುಂದಿನ ದಿನಗಳಲ್ಲಿ ಅಧಿಕೃತ ಮಾಹಿತಿ ಹೊರಬೀಳುವ ನಿರೀಕ್ಷೆಯಿದೆ.ಪಶ್ಚಿಮ ಪದವೀಧರರ ಕ್ಷೇತ್ರ ಚುನಾವಣೆ: ಡಾ. ವಿಶಾಲ ಆರ್. ಚುನಾವಣಾ ವೀಕ್ಷಕರಾಗಿ ನೇಮಕಧಾರವಾಡ: ಕರ್ನಾಟಕ ವಿಧಾನ ಪರಿಷತ್ತಿನ ಕರ್ನಾಟಕ ಪಶ್ಚಿಮ ಪದವೀಧರರ ಕ್ಷೇತ್ರದಿಂದ ನಡೆಯಲಿರುವ ದ್ವೈವಾರ್ಷಿಕ ಚುನಾವಣೆ–2026ಕ್ಕೆ ಸಂಬಂಧಿಸಿದಂತೆ ಡಾ. ವಿಶಾಲ ಆರ್., ಭಾ.ಆ.ಸೇ. ಅವರನ್ನು ಭಾರತ ಚುನಾವಣಾ ಆಯೋಗ ಚುನಾವಣಾ ವೀಕ್ಷಕರಾಗಿ ನೇಮಕ ಮಾಡಿದೆ.ಚುನಾವಣೆಗೆ ಸಂಬಂಧಿಸಿದ ಯಾವುದೇ ಅಹವಾಲುಗಳಿದ್ದಲ್ಲಿ ಸಾರ್ವಜನಿಕರು ಚುನಾವಣಾ ವೀಕ್ಷಕರ ಇ-ಮೇಲ್ vishalravi@rediffmail.com ಹಾಗೂ vishal.r@nic.in ಮೂಲಕ ಸಂಪರ್ಕಿಸಬಹುದು.ಅಲ್ಲದೆ, ಚುನಾವಣಾ ವೀಕ್ಷಕರ ಲೈಸನ್ ಅಧಿಕಾರಿಯಾಗಿರುವ ಹುಬ್ಬಳ್ಳಿಯ ಆಡಳಿತ ಮತ್ತು ಮಾನವ ಸಂಪನ್ಮೂಲ ಅಭಿವೃದ್ಧಿ ಕಾರ್ಪೊರೇಟ್ ಕಚೇರಿಯ ಪ್ರಧಾನ ವ್ಯವಸ್ಥಾಪಕ ಮಹಮ್ಮದ್ ಕೈಝರ್ ಅವರನ್ನು 9164055006 ಸಂಖ್ಯೆಯಲ್ಲಿ ಸಂಪರ್ಕಿಸಬಹುದು ಎಂದು ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತರು ಹಾಗೂ ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ಚುನಾವಣಾಧಿಕಾರಿ ಕೆ.ಎಂ. ಜಾನಕಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಅ.8ರಂದು ಧಾರವಾಡದಲ್ಲಿ ಡಾಕ್ ಅದಾಲತ್ಧಾರವಾಡ: ಧಾರವಾಡ ಅಂಚೆ ವಿಭಾಗದ ವಿಭಾಗೀಯ ಮಟ್ಟದ ಅಕ್ಟೋಬರ್–2026ರ ಡಾಕ್ ಅದಾಲತ್ ಅ.8ರಂದು ಬೆಳಿಗ್ಗೆ 11 ಗಂಟೆಗೆ ಧಾರವಾಡ ಹಿರಿಯ ಅಂಚೆ ಅಧೀಕ್ಷಕರ ಕಚೇರಿಯಲ್ಲಿ ನಡೆಯಲಿದೆ.ಹಿರಿಯ ಅಂಚೆ ಅಧೀಕ್ಷಕರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಅದಾಲತ್‌ನಲ್ಲಿ ಅಂಚೆ, ಸ್ಪೀಡ್ ಪೋಸ್ಟ್, ಪಾರ್ಸೆಲ್, ಕೌಂಟರ್ ಸೇವೆಗಳು, ಉಳಿತಾಯ ಬ್ಯಾಂಕ್, ಮನಿ ಆರ್ಡರ್ ಹಾಗೂ ದುರುಪಯೋಗ ಅಥವಾ ದುರ್ಬಳಕೆಗೆ ಸಂಬಂಧಿಸಿದ ದೂರುಗಳನ್ನು ಪರಿಗಣಿಸಲಾಗುವುದು.ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಅಂಚೆ ಮೂಲಕ, ಖುದ್ದಾಗಿ ಅಥವಾ dodharwad.kaindiapost.gov.in ಇ-ಮೇಲ್ ಮೂಲಕ ಡಾಕ್ ಅದಾಲತ್, ಹಿರಿಯ ಅಂಚೆ ಅಧೀಕ್ಷಕರ ಕಚೇರಿ, ಧಾರವಾಡ ಅಂಚೆ ವಿಭಾಗ, ಧಾರವಾಡ–580008 ವಿಳಾಸಕ್ಕೆ ಅ.6ರೊಳಗಾಗಿ ಸಲ್ಲಿಸಬೇಕಿತ್ತು.ಸಾರ್ವಜನಿಕರ ಅನುಕೂಲಕ್ಕಾಗಿ ವಿಡಿಯೋ ಕಾನ್ಫರೆನ್ಸ್ ಮೂಲಕವೂ ಡಾಕ್ ಅದಾಲತ್‌ನಲ್ಲಿ ಭಾಗವಹಿಸುವ ಅವಕಾಶವಿದ್ದು, ಸಮೀಪದ ಪ್ರಧಾನ ಅಂಚೆ ಕಚೇರಿಯಿಂದ (Head Post Office) VC ಮೂಲಕ ಭಾಗವಹಿಸಬಹುದಾಗಿದೆ. ಅದಾಲತ್‌ಗೆ ಹಾಜರಾಗುವವರಿಗೆ ಯಾವುದೇ ಪ್ರಯಾಣ ಅಥವಾ ದಿನಭತ್ಯೆ ನೀಡಲಾಗುವುದಿಲ್ಲ ಎಂದು ಹಿರಿಯ ಅಂಚೆ ಅಧೀಕ್ಷಕರು ತಿಳಿಸಿದ್ದಾರೆ.











