ಪುತ್ತೂರು : ಬುಧವಾರ (ಅ.7) ಸಂಜೆ ಸುರಿದ ಭಾರಿ ಮಳೆಗೆ ಆನೆಮಜಲು ಕೋರ್ಟ್ ಬಳಿಯ ಅಂಗನವಾಡಿ ಕಟ್ಟಡ ಸಮೀಪದ ಆವರಣ ಗೋಡೆ ಕುಸಿದು ರಸ್ತೆಗೆ ಬಿದ್ದ ಘಟನೆ ನಡೆದಿದೆ. ಇದರಿಂದ ಆನೆಮಜಲು–ದೈಯಾರಮಾಡ ರಸ್ತೆ ಸಂಚಾರಕ್ಕೆ ಅಡಚಣೆಯಾಗಿದೆ.ಕೋರ್ಟ್ ಸಮೀಪದ ಆವರಣ ಗೋಡೆಯ ಒಂದು ಭಾಗ ಕುಸಿದು ರಸ್ತೆಗೆ ಬಿದ್ದಿದ್ದು, ಮತ್ತೊಂದು ಬದಿಯ ಆವರಣ ಗೋಡೆಯೂ ಕುಸಿಯುವ ಹಂತದಲ್ಲಿದೆ. ಇದರಿಂದ ಸ್ಥಳೀಯರಲ್ಲಿ ಆತಂಕ ಉಂಟಾಗಿದೆ.ಕಳಪೆ ಕಾಮಗಾರಿ ಆರೋಪಕಳೆದ ಜನವರಿಯಲ್ಲಿ ಉದ್ಘಾಟನೆಗೊಂಡ ನ್ಯಾಯಾಲಯ ಸಂಕೀರ್ಣದ ಆವರಣ ಗೋಡೆ ಒಂದೇ ಮಳೆಗಾಲ ಪೂರ್ಣಗೊಳ್ಳುವ ಮುನ್ನವೇ ಕುಸಿದಿರುವುದು ಸಾರ್ವಜನಿಕರ ಗಮನ ಸೆಳೆದಿದೆ. ಗೋಡೆ ನಿರ್ಮಾಣದಲ್ಲಿ ಕಳಪೆ ಕಾಮಗಾರಿ ನಡೆದಿರುವ ಆರೋಪವೂ ಕೇಳಿಬಂದಿದೆ.ಸ್ಥಳದಲ್ಲಿ ಮತ್ತಷ್ಟು ಗೋಡೆ ಕುಸಿಯುವ ಸಾಧ್ಯತೆ ಇರುವುದರಿಂದ ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಪರಿಶೀಲನೆ ನಡೆಸಿ, ರಸ್ತೆ ಸಂಚಾರಕ್ಕೆ ಸುರಕ್ಷಿತ ವ್ಯವಸ್ಥೆ ಕಲ್ಪಿಸುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!