ಮಂಗಳೂರು: ಕರಾವಳಿಯ ಧಾರ್ಮಿಕ ಹಾಗೂ ಸಾಂಸ್ಕೃತಿಕ ವೈಭವದ ಪ್ರತೀಕವಾಗಿರುವ ಐತಿಹಾಸಿಕ ಮಂಗಳೂರು ದಸರಾ ಹಾಗೂ ನವರಾತ್ರಿ ಮಹೋತ್ಸವ-2026 ಅ.11ರಿಂದ 22ರವರೆಗೆ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಅತ್ಯಂತ ವೈಭವದಿಂದ ನಡೆಯಲಿದೆ.ಕ್ಷೇತ್ರದ ನವೀಕರಣದ ರೂವಾರಿ ಹಾಗೂ ಕೇಂದ್ರದ ಮಾಜಿ ವಿತ್ತ ಸಚಿವ ಬಿ. ಜನಾರ್ದನ ಪೂಜಾರಿ ಅವರ ಮಾರ್ಗದರ್ಶನದಲ್ಲಿ ನಡೆಯಲಿರುವ ದಸರಾ ಮಹೋತ್ಸವಕ್ಕೆ ಸಕಲ ಸಿದ್ಧತೆಗಳು ಪೂರ್ಣಗೊಂಡಿವೆ.

ಧಾರ್ಮಿಕ ಕಾರ್ಯಕ್ರಮಗಳ ಜತೆಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು, ಸಂಗೀತ-ನೃತ್ಯ ವೈಭವ, ಕ್ರೀಡಾಕೂಟಗಳು ಹಾಗೂ ಜಾನಪದ ಕಲಾ ಪ್ರದರ್ಶನಗಳು ಉತ್ಸವಕ್ಕೆ ಮೆರುಗು ನೀಡಲಿವೆ.ಅ.12ರಂದು ಅದ್ದೂರಿ ಚಾಲನೆಅ.11ರಂದು ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ಮಂಗಳೂರು ದಸರಾ ಮಹೋತ್ಸವಕ್ಕೆ ಚಾಲನೆ ದೊರೆಯಲಿದೆ. ಮಧ್ಯಾಹ್ನ 12 ಗಂಟೆಗೆ ಶ್ರೀ ಶಾರದಾ ಮಾತೆ ಹಾಗೂ ನವದುರ್ಗೆಯರ ಪ್ರತಿಷ್ಠಾಪನೆ ನೆರವೇರಲಿದೆ.ಅ.12ರಂದು ಸಂಜೆ 6.30ಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಂಗಳೂರು ದಸರಾ ಮಹೋತ್ಸವಕ್ಕೆ ಅಧಿಕೃತವಾಗಿ ಚಾಲನೆ ನೀಡಲಿದ್ದಾರೆ. ರಾಜ್ಯದ ವಿವಿಧ ಇಲಾಖೆಗಳ ಸಚಿವರು ಸೇರಿದಂತೆ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.ಅ.21ರಂದು ಸಂಜೆ 4 ಗಂಟೆಗೆ ಮಂಗಳೂರು ದಸರಾ ಮಹೋತ್ಸವದ ಐತಿಹಾಸಿಕ ಶೋಭಾಯಾತ್ರೆಗೆ ಚಾಲನೆ ದೊರೆಯಲಿದೆ.ಪ್ರತಿದಿನ ಚಂಡಿಕಾಹೋಮಅ.12ರಿಂದ 20ರವರೆಗೆ ಪ್ರತಿದಿನ ಬೆಳಗ್ಗೆ 8.30ಕ್ಕೆ ಶ್ರೀಕ್ಷೇತ್ರದಲ್ಲಿ ಚಂಡಿಕಾಹೋಮ ನೆರವೇರಲಿದೆ. ಅ.17ರಂದು ಸಾಮೂಹಿಕ ವಿಶೇಷ ಚಂಡಿಕಾಹೋಮ ನಡೆಯಲಿದ್ದು, ಬೆಳಗ್ಗೆ 11.30ಕ್ಕೆ ಪೂರ್ಣಾಹುತಿ ನೆರವೇರಲಿದೆ. ಸಾರ್ವಜನಿಕರಿಗೂ ಚಂಡಿಕಾಹೋಮದಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ.‘ದಸರಾ ಕಲಾಝೇಂಕಾರ’ದಲ್ಲಿ ಕಲಾ ವೈಭವಕ್ಷೇತ್ರದ ಸಂತೋಷಿ ಕಲಾಮಂಟಪದಲ್ಲಿ ಅ.11ರಿಂದ 20ರವರೆಗೆ ಪ್ರತಿದಿನ ಮಧ್ಯಾಹ್ನ 2.30ರಿಂದ ರಾತ್ರಿ 11.30ರವರೆಗೆ ‘ದಸರಾ ಕಲಾಝೇಂಕಾರ’ ನಡೆಯಲಿದೆ. ರಾಷ್ಟ್ರೀಯ, ಅಂತಾರಾಷ್ಟ್ರೀಯ ಹಾಗೂ ಸ್ಥಳೀಯ ಕಲಾವಿದರು ಸಂಗೀತ, ನೃತ್ಯ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರಸ್ತುತಪಡಿಸಲಿದ್ದಾರೆ.ಇದೇ ವೇದಿಕೆಯಲ್ಲಿ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಹಿಳೆಯರನ್ನು ಪ್ರತಿದಿನ ‘ಅಸಾಮಾನ್ಯ ಸ್ತ್ರೀ’ ಪುರಸ್ಕಾರ ನೀಡಿ ಗೌರವಿಸಲಾಗುತ್ತದೆ.ಕವಿಗೋಷ್ಠಿ, ನೃತ್ಯ ಸ್ಪರ್ಧೆ ಸೇರಿದಂತೆ ಹಲವು ಕಾರ್ಯಕ್ರಮಮಂಗಳೂರು ದಸರಾ ಅಂಗವಾಗಿ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಅ.12ರಂದು ರಾಜ್ಯಮಟ್ಟದ ದಸರಾ ಕವಿಗೋಷ್ಠಿ, ಕಥೆ ಹಾಗೂ ಕವನ ಸ್ಪರ್ಧೆಗಳು ನಡೆಯಲಿವೆ.ಅ.13ರಂದು ಸಂಜೆ 7.30ರಿಂದ ‘ರುದ್ರತಾಂಡವಮ್’ ರಾಜ್ಯಮಟ್ಟದ ಭಕ್ತಿಪ್ರಧಾನ ಸಮೂಹ ನೃತ್ಯ ಸ್ಪರ್ಧೆ ಸೀಸನ್-2 ನಡೆಯಲಿದೆ.ಅ.15ರಂದು ಮಕ್ಕಳಿಗಾಗಿ ‘ಮಕ್ಕಳ ದಸರಾ’ ಆಯೋಜಿಸಲಾಗಿದ್ದು, ಬೆಳಗ್ಗೆ 9 ಗಂಟೆಗೆ ಕಾರ್ಯಕ್ರಮ ಉದ್ಘಾಟನೆಯಾಗಲಿದೆ. ಭಕ್ತಿಗೀತೆ, ಚಿತ್ರಕಲೆ ಹಾಗೂ ದೇಶಭಕ್ತಿಗೀತೆ ಸ್ಪರ್ಧೆಗಳು ಮಕ್ಕಳಿಗಾಗಿ ನಡೆಯಲಿವೆ.ಅ.16ರಂದು ‘ಮುದ್ದು ಶಾರದೆ’ ಸ್ಪರ್ಧೆ, ಅ.18ರಂದು ದಸರಾ ಮ್ಯಾರಥಾನ್ ಎಡಿಷನ್-4 ಹಾಗೂ ‘ಕಿನ್ನಿಪಿಲಿ’ ಸೀಸನ್-2 ನಡೆಯಲಿದೆ.ಅ.19ರಂದು ಮಹಿಳಾ ದಸರಾಅ.19ರಂದು ಮಹಿಳೆಯರಿಗಾಗಿ ವಿಶೇಷವಾಗಿ ‘ಮಹಿಳಾ ದಸರಾ’ ಆಯೋಜಿಸಲಾಗಿದೆ. ಭರತನಾಟ್ಯ, ಬೆಂಕಿ ರಹಿತ ಅಡುಗೆ, ರಂಗೋಲಿ, ಮೆಹಂದಿ, ಸಮೂಹ ಗಾಯನ ಹಾಗೂ ಹೂ ಕಟ್ಟುವ ಸ್ಪರ್ಧೆಗಳು ನಡೆಯಲಿವೆ. ರಾತ್ರಿ 8 ಗಂಟೆಗೆ ಮಹಿಳೆಯರಿಂದ ಸಾಮೂಹಿಕ ಗರ್ಭಾ-ದಾಂಡಿಯಾ ನೃತ್ಯ ನಡೆಯಲಿದೆ.ಅ.20ರಂದು ‘ದಸರಾ ರಂಗಾಂತರಂಗ’ ಹೆಸರಿನಲ್ಲಿ ವೈವಿಧ್ಯಮಯ ಸಾಂಸ್ಕೃತಿಕ ಸ್ಪರ್ಧೆಗಳು ಜರುಗಲಿವೆ.ಶಾರದಾ ಮಾತೆಯ ಮಡಿಲಲ್ಲಿ ಅಕ್ಷರಾಭ್ಯಾಸಅ.20ರಂದು ಬೆಳಗ್ಗೆ 9 ಗಂಟೆಗೆ ಶ್ರೀ ಶಾರದಾ ಮಾತೆಯ ಸನ್ನಿಧಿಯಲ್ಲಿ ಮಕ್ಕಳಿಗೆ ಅಕ್ಷರಾಭ್ಯಾಸ ಕಾರ್ಯಕ್ರಮ ನಡೆಯಲಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆಯಬಹುದು.ಅರಮನೆ ಶೈಲಿಯಲ್ಲಿ ದರ್ಬಾರ್ ಮಂಟಪಈ ಬಾರಿಯ ಮಂಗಳೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಗಳಲ್ಲಿ ದರ್ಬಾರ್ ಮಂಟಪವೂ ಒಂದಾಗಿದೆ. ಶ್ರೀ ಮಹಾಗಣಪತಿ, ಶ್ರೀ ಆದಿಶಕ್ತಿ, ನವದುರ್ಗೆಯರು ಹಾಗೂ ಜ್ಞಾನದಾಯಿನಿ ಶ್ರೀ ಶಾರದಾ ಮಾತೆಯ ನಯನಮನೋಹರ ಮೂರ್ತಿಗಳ ಪ್ರತಿಷ್ಠಾಪನೆ ಹಾಗೂ ಆರಾಧನೆ ನಡೆಯಲಿರುವ ದರ್ಬಾರ್ ಮಂಟಪವನ್ನು ಈ ಬಾರಿ ಅರಮನೆ ಶೈಲಿಯಲ್ಲಿ ಮನಮೋಹಕವಾಗಿ ವಿನ್ಯಾಸಗೊಳಿಸಲಾಗಿದೆ.ಧಾರ್ಮಿಕ ಭಕ್ತಿ, ಸಾಂಸ್ಕೃತಿಕ ವೈವಿಧ್ಯ ಹಾಗೂ ಜನಪದ ಪರಂಪರೆಯ ಸೊಬಗನ್ನು ಒಟ್ಟುಗೂಡಿಸಲಿರುವ ಮಂಗಳೂರು ದಸರಾ ಮಹೋತ್ಸವಕ್ಕೆ ಈ ಬಾರಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಹಾಗೂ ಪ್ರವಾಸಿಗರು ಆಗಮಿಸುವ ನಿರೀಕ್ಷೆಯಿದೆ

Leave a Reply

Your email address will not be published. Required fields are marked *

Join WhatsApp Group
error: Content is protected !!