ಮಂಗಳೂರು: ನಕಲಿ ಪಾಸ್‌ಪೋರ್ಟ್ ಬಳಸಿ ವಿದೇಶಕ್ಕೆ ತೆರಳಲು ಯತ್ನಿಸಿದ ಪ್ರಕರಣದಲ್ಲಿ ನ್ಯಾಯಾಲಯದಿಂದ ಶಿಕ್ಷೆಗೆ ಗುರಿಯಾಗಿ 2020ರಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಉತ್ತರ ಉಪವಿಭಾಗದ ಎಸಿಪಿ ನೇತೃತ್ವದ ತಂಡ ಬಂಧಿಸಿದೆ.ಕಾಸರಗೋಡು ಜಿಲ್ಲೆಯ ಬೇವಿಂಜೆ ನಿವಾಸಿ ವೇಲಾಯುಧನ್ (54) ಬಂಧಿತ ಆರೋಪಿ.2010ರ ಜೂನ್ 22ರಂದು ನಕಲಿ ಪಾಸ್‌ಪೋರ್ಟ್ ಪಡೆದು ಬಜಪೆ ವಿಮಾನ ನಿಲ್ದಾಣದ ಮೂಲಕ ವಿದೇಶಕ್ಕೆ ತೆರಳಲು ಯತ್ನಿಸಿದ್ದ ವೇಳೆ ಇಮಿಗ್ರೇಷನ್ ಅಧಿಕಾರಿಗಳು ವೇಲಾಯುಧನ್‌ನನ್ನು ವಶಕ್ಕೆ ಪಡೆದು ಬಜಪೆ ಠಾಣೆ ಪೊಲೀಸರಿಗೆ ಒಪ್ಪಿಸಿದ್ದರು. ಈ ಸಂಬಂಧ ಬಜಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಪ್ರಕರಣದ ತನಿಖೆ ಪೂರ್ಣಗೊಳಿಸಿದ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಸೇಷನ್ಸ್ ನ್ಯಾಯಾಲಯವು 2020ರ ಡಿಸೆಂಬರ್ 1ರಂದು ವೇಲಾಯುಧನ್‌ಗೆ 1 ವರ್ಷ 6 ತಿಂಗಳ ಜೈಲು ಶಿಕ್ಷೆ ವಿಧಿಸಿತ್ತು.ಈ ತೀರ್ಪಿನ ವಿರುದ್ಧ ಆರೋಪಿ ಕರ್ನಾಟಕ ಹೈಕೋರ್ಟ್‌ಗೆ ಕ್ರಿಮಿನಲ್ ರಿವಿಷನ್ ಪಿಟಿಷನ್ ಸಲ್ಲಿಸಿದ್ದ. ಹೈಕೋರ್ಟ್ ಕೂಡ ಆತನ ಮನವಿಯನ್ನು ತಿರಸ್ಕರಿಸಿತ್ತು. ಬಳಿಕ ಬಂಧನಕ್ಕೆ ಸಿಗದೆ ತಲೆಮರೆಸಿಕೊಂಡಿದ್ದ ವೇಲಾಯುಧನ್‌ನನ್ನು ಅ.8ರಂದು ಮಂಗಳೂರು ಉತ್ತರ ಉಪವಿಭಾಗದ ಎಸಿಪಿ ನೇತೃತ್ವದ ತಂಡ ಪತ್ತೆಹಚ್ಚಿ ವಶಕ್ಕೆ ಪಡೆದುಕೊಂಡಿದೆ.ನಂತರ ಆರೋಪಿಯನ್ನು ಮುಂದಿನ ಕಾನೂನು ಕ್ರಮಕ್ಕಾಗಿ ಬಜಪೆ ಠಾಣೆ ಪೊಲೀಸರಿಗೆ ಹಸ್ತಾಂತರಿಸಲಾಗಿದೆ

Leave a Reply

Your email address will not be published. Required fields are marked *

Join WhatsApp Group
error: Content is protected !!