ಮಂಗಳೂರು, ಅ.8: ಸುಲ್ತಾನ್ ಗೋಲ್ಡ್‌ನಲ್ಲಿ ಖರೀದಿಸಿದ್ದ 48 ಗ್ರಾಂ ತೂಕದ ಚಿನ್ನದ ಸರವನ್ನು ಆಟೋ ರಿಕ್ಷಾದಲ್ಲಿ ಪ್ರಯಾಣಿಸುವ ವೇಳೆ ಅಜಾಗರೂಕತೆಯಿಂದ ಬಿಟ್ಟುಹೋದ ಘಟನೆ ನಡೆದಿದ್ದು, ಆಟೋ ಚಾಲಕನ ಸಮಯಪ್ರಜ್ಞೆ ಹಾಗೂ ಪ್ರಾಮಾಣಿಕತೆಯಿಂದ ಅಮೂಲ್ಯ ಚಿನ್ನದ ಸರ ಸುರಕ್ಷಿತವಾಗಿ ವಾರಸುದಾರರ ಕೈ ಸೇರಿದೆ.ಅಜ್ಜಿಲಾ ಅವರು ಸುಲ್ತಾನ್ ಗೋಲ್ಡ್‌ನಲ್ಲಿ 48 ಗ್ರಾಂ ತೂಕದ ಚಿನ್ನದ ಸರವನ್ನು ಖರೀದಿಸಿದ್ದರು. ಬಳಿಕ ಆಟೋ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಿನ್ನದ ಸರವಿದ್ದ ಬ್ಯಾಗ್ ಅನ್ನು ಅಜಾಗರೂಕತೆಯಿಂದ ಆಟೋದಲ್ಲೇ ಬಿಟ್ಟು ಹೋಗಿದ್ದರು.ಪ್ರಯಾಣ ಮುಗಿದ ಬಳಿಕ ಬ್ಯಾಗ್ ಕಾಣೆಯಾಗಿರುವುದು ಗಮನಕ್ಕೆ ಬಂದಿದ್ದು, ಆತಂಕಗೊಂಡ ಅಜ್ಜಿಲಾ ಅವರು ಚಿನ್ನದ ಸರಕ್ಕಾಗಿ ಹುಡುಕಾಟ ನಡೆಸಿದ್ದರು. ಇದೇ ವೇಳೆ ಆಟೋ ಚಾಲಕ ಬಸವರಾಜ್ ಅವರಿಗೆ ಬ್ಯಾಗ್ ಸಿಕ್ಕಿದ್ದು, ಅದರಲ್ಲಿದ್ದ ಚಿನ್ನದ ಸರವನ್ನು ವಾರಸುದಾರರಿಗೆ ಸುರಕ್ಷಿತವಾಗಿ ಹಿಂದಿರುಗಿಸಿದ್ದಾರೆ.ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನ ಸಿಕ್ಕರೂ ಅದನ್ನು ತಮ್ಮ ಬಳಿ ಇಟ್ಟುಕೊಳ್ಳದೆ ಮಾಲೀಕರಿಗೆ ಮರಳಿಸುವ ಮೂಲಕ ಬಸವರಾಜ್ ಅವರು ಪ್ರಾಮಾಣಿಕತೆ ಹಾಗೂ ಮಾನವೀಯತೆ ಮೆರೆದಿದ್ದಾರೆ. ಅವರ ಈ ನಡೆ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!