ಬೆಂಗಳೂರು: ರಾಜಧಾನಿಯಲ್ಲಿ ಅಕ್ರಮ ಚಟುವಟಿಕೆಗಳ ವಿರುದ್ಧ ಕಾರ್ಯಾಚರಣೆ ಮುಂದುವರಿಸಿರುವ ಸಿಸಿಬಿ ಪೊಲೀಸರು, ಮಹದೇವಪುರ ಪೊಲೀಸ್ ಠಾಣಾ ವ್ಯಾಪ್ತಿಯ ಕೆಆರ್‌ ಪುರದ ಸರಸ್ವತಿ ನಗರದಲ್ಲಿದ್ದ ವೇಶ್ಯಾವಾಟಿಕೆ ಅಡ್ಡೆಯ ಮೇಲೆ ದಾಳಿ ನಡೆಸಿ ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ.ಸಿಸಿಬಿಯ ಮಹಿಳಾ ಸಂರಕ್ಷಣಾ ವಿಭಾಗದ ಅಧಿಕಾರಿಗಳು ಖಚಿತ ಮಾಹಿತಿ ಆಧರಿಸಿ ಈ ದಾಳಿ ನಡೆಸಿದ್ದಾರೆ. ಕುಟುಂಬ ವಾಸಕ್ಕಾಗಿ ಎಂದು ಹೇಳಿ ಮನೆಯನ್ನು ಬಾಡಿಗೆಗೆ ಪಡೆದಿದ್ದ ಮಹಿಳೆಯೊಬ್ಬಳು, ಅದೇ ಮನೆಯಲ್ಲಿ ಗುಟ್ಟಾಗಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದಳು ಎನ್ನುವುದು ತನಿಖೆಯಿಂದ ತಿಳಿದುಬಂದಿದೆ.ಪರಿಚಯಸ್ಥರ ಮೂಲಕ ಗಿರಾಕಿಗಳ ಮೊಬೈಲ್‌ ನಂಬರ್‌ಗಳನ್ನು ಹಂಚಿಕೊಂಡು, ಹಣದ ಆಮಿಷವೊಡ್ಡಿ ಮಹಿಳೆಯರನ್ನು ದಂಧೆಗೆ ಬಳಸಿಕೊಳ್ಳುತ್ತಿದ್ದಳು ಎನ್ನಲಾಗಿದೆ.ದಾಳಿ ವೇಳೆ ಮಹಿಳೆಯರನ್ನು ಕೋಣೆಯಲ್ಲಿ ಇರಿಸಿರುವುದು ಪೊಲೀಸರ ಗಮನಕ್ಕೆ ಬಂದಿದ್ದು, ಅವರನ್ನು ರಕ್ಷಿಸಿ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ.ಈ ಕುರಿತು ಮಹದೇವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ದಂಧೆ ನಡೆಸುತ್ತಿದ್ದ ಅನುಪಮಾ ಎಂಬಾಕೆಯನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ಮುಂದುವರಿಸಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!