ಮಂಗಳೂರು: ಕೋರಿಯರ್ ಮೂಲಕ ಎಂಡಿಎಂಎ ಮಾದಕವಸ್ತುವನ್ನು ಮಂಗಳೂರಿಗೆ ಸಾಗಿಸಿ, ಬಳಿಕ ಮಂಗಳೂರು ನಗರ ಹಾಗೂ ಕೇರಳದ ವಿವಿಧ ಪ್ರದೇಶಗಳಲ್ಲಿ ಮಾರಾಟ ಮಾಡಲು ಸಂಚು ರೂಪಿಸಿದ್ದ ಜಾಲವನ್ನು ಮಂಗಳೂರು ಸಿಸಿಬಿ ಪೊಲೀಸರು ಪತ್ತೆಹಚ್ಚಿದ್ದಾರೆ. ಈ ಸಂಬಂಧ ಮೂವರು ಆರೋಪಿಗಳನ್ನು ಬಂಧಿಸಿದ್ದು, ₹1.58 ಕೋಟಿ ಮೌಲ್ಯದ 1 ಕೆಜಿ 796.96 ಗ್ರಾಂ ಎಂಡಿಎಂಎ ಮಾದಕವಸ್ತುವನ್ನು ವಶಪಡಿಸಿಕೊಂಡಿದ್ದಾರೆ.ಅ.8ರಂದು ರಾತ್ರಿ 10 ಗಂಟೆಗೆ ಉಳ್ಳಾಲ ತಾಲೂಕಿನ ಕುಂಪಲದ ಡಿಮಾರ್ಟ್ ಬಳಿ ಕಾರ್ಯಾಚರಣೆ ನಡೆಸಿದ ಸಿಸಿಬಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ ಎಂಡಿಎಂಎ ಜೊತೆಗೆ ಮೂರು ಮೊಬೈಲ್ ಫೋನ್‌ಗಳು, ಮಾದಕವಸ್ತು ಸಾಗಾಟಕ್ಕೆ ಬಳಸಿದ ಮಾರುತಿ ಸುಜುಕಿ ಸ್ವಿಫ್ಟ್ ಕಾರು, ಆಟೋ ರಿಕ್ಷಾ, ಕೋರಿಯರ್ ರಟ್ಟಿನ ಬಾಕ್ಸ್ ಹಾಗೂ ವಾಟರ್ ಪ್ಯೂರಿಫೈಯರ್‌ನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ₹1,63,84,000 ಎಂದು ಪೊಲೀಸರು ತಿಳಿಸಿದ್ದಾರೆ.ಅಮೃತಸರದಿಂದ ಖರೀದಿ, ಕೋರಿಯರ್ ಮೂಲಕ ಸಾಗಾಟಆರೋಪಿಗಳು ಪಂಜಾಬ್‌ನ ಅಮೃತಸರದಿಂದ ಎಂಡಿಎಂಎ ಖರೀದಿಸಿದ್ದರು ಎನ್ನಲಾಗಿದೆ. ಬಳಿಕ ವಾಟರ್ ಪ್ಯೂರಿಫೈಯರ್‌ನಲ್ಲಿ ನೀರು ಸಂಗ್ರಹವಾಗುವ ಭಾಗದೊಳಗೆ ಮಾದಕವಸ್ತುವನ್ನು ಬಚ್ಚಿಟ್ಟು, ಕೋರಿಯರ್ ಮೂಲಕ ಮಂಗಳೂರಿಗೆ ಕಳುಹಿಸುವ ಯೋಜನೆ ರೂಪಿಸಿದ್ದರು. ನಂತರ ಮಂಗಳೂರು ನಗರ ಹಾಗೂ ಕೇರಳದ ವಿವಿಧ ಪ್ರದೇಶಗಳಿಗೆ ಪೂರೈಕೆ ಮಾಡಿ ಮಾರಾಟ ಮಾಡಲು ಸಂಚು ರೂಪಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.ಬಂಧಿತ ಆರೋಪಿಗಳು ಯಾರು?ಅಬ್ದುಲ್ ಹಾಪೀಲ್ (25) – ಮಂಗಳಪಾಡಿ, ಕಾಸರಗೋಡು ಜಿಲ್ಲೆ, ಕೇರಳ.ಜಿಯಾವುಲ್ ಹಕ್ (30) – ಕಸಬಾ ಬೆಂಗ್ರೆ, ಕೂಳೂರು, ಮಂಗಳೂರು.ಅಲ್ತಾಫ್ (28) – ಪಾಂಡೇಶ್ವರ, ಮಂಗಳೂರು.ಹಿಂದೆಯೂ ಪ್ರಕರಣ ದಾಖಲುಅಬ್ದುಲ್ ಹಾಪೀಲ್ ವಿರುದ್ಧ ಈ ಹಿಂದೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಮಾದಕವಸ್ತು ಸೇವನೆಗೆ ಸಂಬಂಧಿಸಿದ ಪ್ರಕರಣ ದಾಖಲಾಗಿತ್ತು. ಜಿಯಾವುಲ್ ಹಕ್ ದುಬೈನ ರಸ್ ಅಲ್ ಖೈಮಾದಲ್ಲಿ ಮಾದಕವಸ್ತು ಮಾರಾಟ ಪ್ರಕರಣದಲ್ಲಿ ಭಾಗಿಯಾಗಿ ಮೂರು ವರ್ಷಗಳ ಜೈಲು ಶಿಕ್ಷೆ ಅನುಭವಿಸಿ ಭಾರತಕ್ಕೆ ಮರಳಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಅಲ್ತಾಫ್ ವಿರುದ್ಧವೂ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಮಾದಕವಸ್ತು ಸೇವನೆಗೆ ಸಂಬಂಧಿಸಿದ ಪ್ರಕರಣ ದಾಖಲಾಗಿತ್ತು.ಈ ಕುರಿತು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ. ಆರೋಪಿಗಳನ್ನು ವಿಚಾರಣೆ ನಡೆಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!