ಪುತ್ತೂರು: ದರ್ಬೆಯ ಬೆಥನಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿಯರು ಕಬಡ್ಡಿ ಪಂದ್ಯಾಟದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ, ಸತತ ನಾಲ್ಕನೇ ಬಾರಿಗೆ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ಶಾಲಾ ಶಿಕ್ಷಣ ಇಲಾಖೆ, ಕೊಡಗು ಜಿಲ್ಲಾ ಪಂಚಾಯತ್, ಉಪನಿರ್ದೇಶಕರ ಕಚೇರಿ ಹಾಗೂ ಕುಶಾಲನಗರದ ಜ್ಞಾನಭಾರತಿ ಪ್ರೌಢಶಾಲೆಯ ಸಂಯುಕ್ತ ಆಶ್ರಯದಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ 17ರ ವಯೋಮಾನದ ಬಾಲಕ-ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ಬೆಥನಿ ಆಂಗ್ಲ ಮಾಧ್ಯಮ ಶಾಲೆಯ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ಈ ಸಾಧನೆ ಮಾಡಿದೆ.ತಂಡದ ಆಟಗಾರ್ತಿಯರಾದ ಜುಏನಾ ಡ್ಯಾಝಲ್ ಕುಟಿನ್ಹಾ, ಸನ್ನಿಧಿ, ಹಾರ್ದಿಕ ಪಿ., ಜೆನಿಟ ಸಿಂಧು ಪ್ರಸನ್ನ, ಧನ್ಯಶ್ರೀ, ಜನನಿ ಪಿ. ಗೌಡ, ಆಯಿಷತ್ ಶಹೀಮ, ಫಾತಿಮತ್ ಅಫ್ರಾ, ಎಚ್. ನಮೃತಾ ಶೆಟ್ಟಿ, ದಿಶಾ ಸುನಿಲ್ ಸಾಲಿಯಾನ್, ಶಾನ್ವಿ, ಮನಸ್ವಿ, ಶ್ರೇಯ ಮತ್ತು ನಿಧಿಶ್ರೀ ಉತ್ತಮ ಪ್ರದರ್ಶನ ನೀಡಿದರು.
ಜುಏನಾ ಡ್ಯಾಝಲ್ ಕುಟಿನ್ಹಾ ಸವ್ಯಸಾಚಿ ಆಟಗಾರ್ತಿ ಪ್ರಶಸ್ತಿ ಪಡೆದರೆ, ಹಾರ್ದಿಕ ಪಿ. ಉತ್ತಮ ದಾಳಿಗಾರ್ತಿ ಪ್ರಶಸ್ತಿಗೆ ಭಾಜನರಾದರು.ಶಾಲಾ ಮುಖ್ಯ ಶಿಕ್ಷಕಿ ಭಗಿನಿ ಅನಿತಾ ಟ್ರೆಸ್ಸಿ ಅವರ ಮಾರ್ಗದರ್ಶನದಲ್ಲಿ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಾಗೂ ರಾಷ್ಟ್ರೀಯ ಕಬಡ್ಡಿ ತರಬೇತುದಾರ ಬಾಲಕೃಷ್ಣ ರೈ ಪೊರ್ದಾಲ್ ಅವರು ತಂಡಕ್ಕೆ ತರಬೇತಿ ನೀಡಿದ್ದಾರೆ.











