ಪುತ್ತೂರು: ನಗರದ ಮುಖ್ಯ ರಸ್ತೆಯಲ್ಲಿರುವ ಸೋಜಾ ಅಲ್ಯೂಮಿನಿಯಂ ಅಂಗಡಿಯ ಮುಂಭಾಗದ ಹಳೆಯ ಕಟ್ಟಡವೊಂದರಲ್ಲಿ ಭಾನುವಾರ ಮುಂಜಾನೆ ಸುಮಾರು 3 ಗಂಟೆಯ ವೇಳೆಗೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ.ಈ ಸಂದರ್ಭದಲ್ಲಿ ಬೆಂಗಳೂರಿನಿಂದ ಪುತ್ತೂರಿಗೆ ಬರುತ್ತಿದ್ದ ರೋಟರಿ ಕ್ಲಬ್ ಪುತ್ತೂರು ಈಸ್ಟ್‌ನ ಅಧ್ಯಕ್ಷ ರವಿಕುಮಾರ್ ರೈ ಕೆದಂಬಾಡಿ ಮಠ ಅವರು ಮಾರ್ಗಮಧ್ಯೆ ಕಟ್ಟಡದಲ್ಲಿ ಬೆಂಕಿ ಉರಿಯುತ್ತಿರುವುದನ್ನು ಗಮನಿಸಿದ್ದಾರೆ.ತಕ್ಷಣವೇ ಅವರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಮಾಹಿತಿ ಲಭಿಸಿದ ಕೂಡಲೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರು.ಮುಂಜಾನೆಯ ವೇಳೆಯಲ್ಲಿ ಸಂಭವಿಸಿದ ಈ ಅಗ್ನಿ ಅವಘಡವನ್ನು ಗಮನಿಸಿ ತಕ್ಷಣ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡುವ ಮೂಲಕ ರವಿಕುಮಾರ್ ರೈ ಅವರು ಸಮಯಪ್ರಜ್ಞೆ ಮೆರೆದಿದ್ದಾರೆ. ಅವರ ತ್ವರಿತ ಸ್ಪಂದನೆಯಿಂದ ಅಗ್ನಿಶಾಮಕ ದಳದ ಸಿಬ್ಬಂದಿ ಶೀಘ್ರವಾಗಿ ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ನಡೆಸಲು ಸಾಧ್ಯವಾಯಿತು.

Leave a Reply

Your email address will not be published. Required fields are marked *

Join WhatsApp Group
error: Content is protected !!