ಪುತ್ತೂರು: ನಗರದ ಪುತ್ತೂರು–ಬೊಳುವಾರು ರಸ್ತೆಯ ಮಹಿಳಾ ಪೊಲೀಸ್ ಠಾಣೆ ಸಮೀಪ, ಹಳೆಯ ಗಣೇಶ್ ಪ್ರಸಾದ್ ಹೋಟೆಲ್ ಮುಂಭಾಗದಲ್ಲಿ ರಸ್ತೆಯ ಮಧ್ಯಭಾಗದಲ್ಲಿರುವ ಡಿವೈಡರ್ ವಾಹನ ಸವಾರರಿಗೆ ಅಪಾಯಕಾರಿಯಾಗಿ ಪರಿಣಮಿಸಿದೆ.
ಡಿವೈಡರ್ ತಗ್ಗಾಗಿದ್ದು, ಸಮರ್ಪಕವಾಗಿ ಗೋಚರಿಸದಿರುವುದರಿಂದ ವಿಶೇಷವಾಗಿ ರಾತ್ರಿ ವೇಳೆಯಲ್ಲಿ ವಾಹನ ಸವಾರರಿಗೆ ಇದು ಗಮನಕ್ಕೆ ಬಾರದಂತಾಗಿದೆ. ಡಿವೈಡರ್‌ಗೆ ಬಣ್ಣ ಬಳಿಯದಿರುವುದು, ರಿಫ್ಲೆಕ್ಟರ್ ಅಥವಾ ಎಚ್ಚರಿಕೆ ಫಲಕ ಅಳವಡಿಸದಿರುವುದರಿಂದ ಅಪಾಯ ಮತ್ತಷ್ಟು ಹೆಚ್ಚಾಗಿದೆ.
ಈಗಾಗಲೇ ಹಲವು ವಾಹನಗಳು ಡಿವೈಡರ್ ಮೇಲೆ ಹತ್ತಿ ಹಾನಿಗೊಳಗಾಗಿವೆ ಎಂದು ಸ್ಥಳೀಯರು ತಿಳಿಸಿದ್ದಾರೆ. ರಸ್ತೆಯ ಮಧ್ಯದಲ್ಲಿರುವ ಡಿವೈಡರ್ ರಾತ್ರಿ ವೇಳೆ ವಾಹನ ಸವಾರರಿಗೆ ಸ್ಪಷ್ಟವಾಗಿ ಕಾಣುವಂತೆ ಅಗತ್ಯ ಸುರಕ್ಷತಾ ಕ್ರಮ ಕೈಗೊಳ್ಳಬೇಕು ಎಂಬ ಆಗ್ರಹ ಕೇಳಿಬಂದಿದೆ.
ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಸ್ಥಳ ಪರಿಶೀಲಿಸಿ, ಡಿವೈಡರ್‌ಗೆ ಬಣ್ಣ, ರಿಫ್ಲೆಕ್ಟರ್ ಹಾಗೂ ಎಚ್ಚರಿಕೆ ಫಲಕ ಅಳವಡಿಸಿ ಅಪಾಯ ತಪ್ಪಿಸಬೇಕು ಎಂದು ಸಾರ್ವಜನಿಕರು ಮನವಿ ಮಾಡಿದ್ದಾರೆ.











