ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸೋಮವಾರ ನಿಗದಿಯಾಗಿದ್ದ ಉಡುಪಿ ಮತ್ತು ಮಂಗಳೂರು ಪ್ರವಾಸವನ್ನು ಅನಿವಾರ್ಯ ಕಾರಣಗಳಿಂದ ರದ್ದುಗೊಳಿಸಲಾಗಿದೆ.ಈ ಕುರಿತು ಮುಖ್ಯಮಂತ್ರಿಗಳ ಕಾರ್ಯಾಲಯ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದ್ದು, ಕರಾವಳಿ ಜಿಲ್ಲೆಗಳಲ್ಲಿ ನಿಗದಿಯಾಗಿದ್ದ ಮುಖ್ಯಮಂತ್ರಿಗಳ ಕಾರ್ಯಕ್ರಮಗಳನ್ನು ರದ್ದುಗೊಳಿಸಿರುವುದಾಗಿ ತಿಳಿಸಿದೆ.ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಂಗಳೂರು ದಸರಾ ಮಹೋತ್ಸವಕ್ಕೆ ಚಾಲನೆ ನೀಡುವ ಕಾರ್ಯಕ್ರಮ ನಿಗದಿಯಾಗಿತ್ತು. ಆದರೆ, ಇದೀಗ ಅವರ ಕರಾವಳಿ ಪ್ರವಾಸ ರದ್ದಾಗಿರುವ ಹಿನ್ನೆಲೆಯಲ್ಲಿ ಮಂಗಳೂರು ದಸರಾ ಉದ್ಘಾಟನಾ ಕಾರ್ಯಕ್ರಮಕ್ಕೂ ಅವರು ಗೈರಾಗಲಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!