ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕರ್ನಾಟಕ ಸೇರಿದಂತೆ ಆರು ರಾಜ್ಯಗಳಿಗೆ ನೂತನ ರಾಜ್ಯಪಾಲರನ್ನು ನೇಮಕ ಮಾಡಿದ್ದಾರೆ.ಸುಧಾ ಯಾದವ್ ಅವರನ್ನು ಕರ್ನಾಟಕದ ನೂತನ ರಾಜ್ಯಪಾಲರನ್ನಾಗಿ ನೇಮಕ ಮಾಡಲಾಗಿದೆ. ಸಿಕ್ಕಿಂ ರಾಜ್ಯಪಾಲರಾಗಿದ್ದ ಓಂ ಪ್ರಕಾಶ್ ಮಾಥುರ್ ಅವರನ್ನು ಕೇರಳದ ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ. ಕೇರಳದ ರಾಜ್ಯಪಾಲರಾಗಿದ್ದ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರನ್ನು ತಮಿಳುನಾಡಿನ ರಾಜ್ಯಪಾಲರನ್ನಾಗಿ ನೇಮಕ ಮಾಡಲಾಗಿದೆ.ಇನ್ನು ಬ್ರಜ್ ಮೋಹನ್ ರಾಮ್ ಅವರನ್ನು ಒಡಿಶಾದ ರಾಜ್ಯಪಾಲರನ್ನಾಗಿ, ಧಲ್ ಸಿಂಗ್ ಬಿಸೇನ್ ಅವರನ್ನು ಉತ್ತರಾಖಂಡದ ರಾಜ್ಯಪಾಲರನ್ನಾಗಿ ಹಾಗೂ ದುಷ್ಯಂತ್ ಗೌತಮ್ ಅವರನ್ನು ಸಿಕ್ಕಿಂ ರಾಜ್ಯದ ರಾಜ್ಯಪಾಲರನ್ನಾಗಿ ನೇಮಕ ಮಾಡಲಾಗಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!