ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯನ್ನು ‘ಮಂಗಳೂರು ಜಿಲ್ಲೆ’ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸಾರ್ವಜನಿಕರಿಂದ ಸಲಹೆ ಮತ್ತು ಅಭಿಪ್ರಾಯಗಳನ್ನು ಆಹ್ವಾನಿಸಿದೆ.ಮಂಗಳೂರಿನಲ್ಲಿ ಇತ್ತೀಚೆಗೆ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಜಿಲ್ಲೆಯನ್ನು ಮರುನಾಮಕರಣ ಮಾಡುವ ಕುರಿತು ನಿರ್ಣಯ ಕೈಗೊಳ್ಳಲಾಗಿತ್ತು. ಈ ಬಗ್ಗೆ ಸಾರ್ವಜನಿಕರ ಅಭಿಪ್ರಾಯ ಸಂಗ್ರಹಿಸಿ ಮುಂದಿನ ತೀರ್ಮಾನ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದರು. ಅದರಂತೆ ಇದೀಗ ಸಾರ್ವಜನಿಕರಿಂದ ಅಧಿಕೃತವಾಗಿ ಅಭಿಪ್ರಾಯ ಆಹ್ವಾನಿಸಲಾಗಿದೆ.ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವಂತೆ ರಾಜಕಾರಣಿಗಳು, ಸಾಮಾಜಿಕ ಚಿಂತಕರು, ಸರ್ವಧರ್ಮಗಳ ಹಿರಿಯರು ಹಾಗೂ ಜಿಲ್ಲೆಯ ವಿವಿಧ ಸಂಘಟನೆಗಳಿಂದ ಸರ್ಕಾರಕ್ಕೆ ಹಲವು ಮನವಿಗಳು ಸಲ್ಲಿಕೆಯಾಗಿವೆ ಎಂದು ತಿಳಿಸಲಾಗಿದೆ.ಭಾರತ ಸರ್ಕಾರದ ಗೃಹ ಸಚಿವಾಲಯದ ಮಾರ್ಗಸೂಚಿಗಳು ಹಾಗೂ ಕರ್ನಾಟಕ ಭೂ ಕಂದಾಯ ಅಧಿನಿಯಮ, 1964ರ ಸೆಕ್ಷನ್ 4(4ಎ)ರ ಅಡಿಯಲ್ಲಿ ಸಾರ್ವಜನಿಕರಿಂದ ಸ್ವೀಕೃತವಾಗುವ ಸಲಹೆ ಮತ್ತು ಅಭಿಪ್ರಾಯಗಳನ್ನು ಪರಿಶೀಲಿಸಲಾಗುತ್ತದೆ.ಅಭಿಪ್ರಾಯ ಸಲ್ಲಿಸಲು ವಿಳಾಸಗಳುಸಾರ್ವಜನಿಕರು ಅಧಿಸೂಚನೆಯು ರಾಜ್ಯಪತ್ರದಲ್ಲಿ ಪ್ರಕಟಗೊಂಡ ದಿನಾಂಕದಿಂದ 30 ದಿನಗಳೊಳಗಾಗಿ ಲಿಖಿತವಾಗಿ ಅಥವಾ ಇ-ಮೇಲ್ ಮೂಲಕ ತಮ್ಮ ಸಲಹೆಗಳನ್ನು ಸಲ್ಲಿಸಬಹುದು.1. ಮುಖ್ಯಮಂತ್ರಿ ಸಚಿವಾಲಯ ಕೊಠಡಿ ಸಂಖ್ಯೆ 235, 2ನೇ ಮಹಡಿ, ವಿಧಾನಸೌಧ, ಬೆಂಗಳೂರು–560001. ಇ-ಮೇಲ್: cm.kar@nic.in2. ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು, ಕಂದಾಯ ಇಲಾಖೆ ಕೊಠಡಿ ಸಂಖ್ಯೆ 711, 7ನೇ ಮಹಡಿ, ಬಹುಮಹಡಿಗಳ ಕಟ್ಟಡ, ಡಾ. ಬಿ.ಆರ್. ಅಂಬೇಡ್ಕರ್ ವೀಥಿ, ಬೆಂಗಳೂರು–560001. ಇ-ಮೇಲ್: Prs.revenue@gmail.com3. ಜಿಲ್ಲಾಧಿಕಾರಿಗಳು, ದಕ್ಷಿಣ ಕನ್ನಡ ಜಿಲ್ಲೆ ಜಿಲ್ಲಾಧಿಕಾರಿ ಕಾರ್ಯಾಲಯ, ಪ್ರಜಾಸೌಧ, ಪಡೀಲು, ಮಂಗಳೂರು–575007. ಇ-ಮೇಲ್: dc.mnglr@gmail.comಸಾರ್ವಜನಿಕರಿಂದ ಸ್ವೀಕೃತವಾಗುವ ಅಭಿಪ್ರಾಯಗಳನ್ನು ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!