ಪುತ್ತೂರು: ಪಾಂಗ್ಳಾಯಿ ದರ್ಬೆಯ ಬೆಥನಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ ಅಬ್ದುಲ್ ಆರ್. ಜಹಾಷ್ ಮತ್ತು ಮಹಮ್ಮದ್ ಹೂದ್ ಅವರು ಮೈಸೂರು ವಿಭಾಗ ಮಟ್ಟದ 14ರ ವಯೋಮಾನದ ಬಾಲಕರ ವಾಲಿಬಾಲ್ ಪಂದ್ಯಾಟದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ತಂಡವನ್ನು ಪ್ರತಿನಿಧಿಸಿ ಉತ್ತಮ ಪ್ರದರ್ಶನ ನೀಡಿದ್ದಾರೆ. ಇವರ ತಂಡವು ದ್ವಿತೀಯ ಸ್ಥಾನ ಪಡೆದುಕೊಂಡಿದ್ದು, ಮಹಮ್ಮದ್ ಹೂದ್ ರಾಜ್ಯ ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ.ಕರ್ನಾಟಕ ಸರಕಾರದ ಶಾಲಾ ಶಿಕ್ಷಣ ಇಲಾಖೆಯ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಕುಂದಾಪುರ ವಲಯದ ಬೈಂದೂರು ತಾಲೂಕಿನ ಬೆಳ್ವೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 14 ಮತ್ತು 17ರ ವಯೋಮಾನದ ಬಾಲಕ-ಬಾಲಕಿಯರ ವಿಭಾಗೀಯ ಮಟ್ಟದ ವಾಲಿಬಾಲ್ ಪಂದ್ಯಾಟ ನಡೆಯಿತು.ಈ ಪಂದ್ಯಾಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ 14ರ ವಯೋಮಾನದ ಬಾಲಕರ ತಂಡವು ರನ್ನರ್‌ಅಪ್ ಸ್ಥಾನ ಗಳಿಸಿತು. ತಂಡದ ಸಾಧನೆಯಲ್ಲಿ ಬೆಥನಿ ಶಾಲೆಯ ವಿದ್ಯಾರ್ಥಿಗಳು ಪ್ರಮುಖ ಪಾತ್ರ ವಹಿಸಿದ್ದು, ಮಹಮ್ಮದ್ ಹೂದ್ ಅವರು ರಾಜ್ಯ ಮಟ್ಟದ ಪಂದ್ಯಾಟದಲ್ಲಿ ಭಾಗವಹಿಸಲು ಅರ್ಹತೆ ಪಡೆದುಕೊಂಡಿದ್ದಾರೆ.ವಿದ್ಯಾರ್ಥಿಗಳ ಕ್ರೀಡಾ ಸಾಧನೆಗೆ ಶಾಲೆಯ ಆಡಳಿತ ಮಂಡಳಿ, ಪ್ರಾಂಶುಪಾಲರು, ಶಿಕ್ಷಕ ವೃಂದ, ದೈಹಿಕ ಶಿಕ್ಷಣ ಶಿಕ್ಷಕರು ಹಾಗೂ ಪೋಷಕರು ಅಭಿನಂದನೆ ಸಲ್ಲಿಸಿದ್ದು, ರಾಜ್ಯ ಮಟ್ಟದ ಪಂದ್ಯಾಟಕ್ಕೆ ಶುಭ ಹಾರೈಸಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!