ಬೆಳ್ತಂಗಡಿ: ನಾವೂರು ಗ್ರಾಮದ ಕ್ಲಿನಿಕ್‌ಗೆ ಬೆಂಕಿ ಹಚ್ಚಿ ಔಷಧ ಹಾಗೂ ವೈದ್ಯಕೀಯ ಸಲಕರಣೆಗಳನ್ನು ಸುಟ್ಟುಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬೆಳ್ತಂಗಡಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.ಬೆಳ್ತಂಗಡಿ ನಡ ಗ್ರಾಮದ ಡಾ. ಪ್ರದೀಪ ಎ. (51) ಅವರು ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದಲ್ಲಿ ನಡೆಸುತ್ತಿದ್ದ ಕ್ಲಿನಿಕ್‌ಗೆ ಅ. 6ರಂದು ರಾತ್ರಿ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದರು. ಘಟನೆಯಲ್ಲಿ ಔಷಧಗಳು ಹಾಗೂ ವೈದ್ಯಕೀಯ ಸಲಕರಣೆಗಳು ಸೇರಿದಂತೆ ಅಂದಾಜು ₹2ರಿಂದ ₹3 ಲಕ್ಷ ಮೌಲ್ಯದ ಸೊತ್ತುಗಳು ಸುಟ್ಟುಹೋಗಿದ್ದವು.ಈ ಕುರಿತು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 112/2026ರ ಅಡಿಯಲ್ಲಿ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) 2023ರ ಕಲಂ 326(f), 326(g) ಮತ್ತು 324(5)ರಂತೆ ಪ್ರಕರಣ ದಾಖಲಾಗಿತ್ತು.ಪ್ರಕರಣದ ತನಿಖೆ ನಡೆಸಿದ ಪೊಲೀಸರು, ನಾವೂರು ನಿವಾಸಿಗಳಾದ ರವಿ ಕುಮಾರ್ (31), ಸುರೇಶ್ ಪಿ.ಎನ್. (44) ಮತ್ತು ದಿನೇಶ್ ಪ್ರಭು (51) ಎಂಬವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!