ಮಂಗಳೂರು: ಕನ್ನಡ ರಾಜ್ಯೋತ್ಸವದ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಅನುಪಮ ಸೇವೆ ಸಲ್ಲಿಸಿ ಸಾಧನೆಗೈದ ಗಣ್ಯರಿಗೆ ನವೆಂಬರ್ 1ರಂದು ಪ್ರದಾನ ಮಾಡಲಾಗುವ 2025-26ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪ್ರಶಸ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಸಾಹಿತ್ಯ, ಶಿಕ್ಷಣ, ಸಂಗೀತ, ನೃತ್ಯ, ಕ್ರೀಡೆ, ಕೃಷಿ, ಲಲಿತಕಲೆ, ಸಮಾಜಸೇವೆ, ಜಾನಪದ, ಪರಿಸರ ವಿಜ್ಞಾನ, ವೈದ್ಯಕೀಯ, ಸಂಶೋಧನೆ ಹಾಗೂ ಪತ್ರಿಕೋದ್ಯಮ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದವರು ಅರ್ಜಿ ಸಲ್ಲಿಸಬಹುದು.ಆಸಕ್ತರು ತಮ್ಮ ಸೇವೆ ಮತ್ತು ಸಾಧನೆಗಳ ವಿವರ ಹಾಗೂ ಸಂಬಂಧಿತ ದಾಖಲೆಗಳೊಂದಿಗೆ ಅಕ್ಟೋಬರ್ 24ರೊಳಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಗೆ ಅರ್ಜಿ ಸಲ್ಲಿಸಬೇಕು ಎಂದು ಅಪರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.










