ಪುತ್ತೂರು: ಪುತ್ತೂರಿನ ಲಾಡ್ಜ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಮೇಲೆ ಮೂವರು ಹಲ್ಲೆ ನಡೆಸಿ, ಜೀವ ಬೆದರಿಕೆ ಹಾಕಿರುವ ಆರೋಪ ಕೇಳಿಬಂದಿದೆ.ಕಡಬ ತಾಲೂಕಿನ ಕೊಯಿಲ ನಿವಾಸಿ ಮಹಮ್ಮದ್ ರಿಫಾಯಿ (27) ಅವರು ನೀಡಿದ ದೂರಿನ ಪ್ರಕಾರ, ಅಕ್ಟೋಬರ್ 17ರಂದು ರಾತ್ರಿ ಅವರು ಕೆಲಸ ಮಾಡುತ್ತಿದ್ದ ಲಾಡ್ಜ್‌ಗೆ ಫಾರೂಕ್, ಸೋನು ಮತ್ತು ಇಷಾನ್ ಎಂಬವರು ಬಂದು ಅವಾಚ್ಯವಾಗಿ ನಿಂದಿಸಿ, ಜೀವ ಬೆದರಿಕೆ ಹಾಕಿ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ಈ ಸಂಬಂಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 126/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 126(2), 352, 351(2) ಮತ್ತು 115(2) ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!