ಉಪ್ಪಿನಂಗಡಿ: ಇಲ್ಲಿನ ಶೆಣೈ ರಸ್ತೆಯಲ್ಲಿರುವ ಬಾರ್ ಸಮೀಪ ಮಾತಿನ ಚಕಮಕಿ ನಡೆದು ಗಲಾಟೆ ಸಂಭವಿಸಿದ ವೇಳೆ ತಲವಾರು ಪ್ರದರ್ಶಿಸಿ ಸಾರ್ವಜನಿಕರಲ್ಲಿ ಭೀತಿ ಮೂಡಿಸಿದ ಘಟನೆ ಅ.18ರ ರಾತ್ರಿ ನಡೆದಿದೆ.ಮಂಜುನಾಥ್, ವಿಶ್ವನಾಥ ಹಾಗೂ ಮತ್ತೋರ್ವ ವ್ಯಕ್ತಿಯ ನಡುವೆ ಮಾತಿನ ಚಕಮಕಿ ನಡೆದು ಗಲಾಟೆ ಉಂಟಾಗಿತ್ತು. ಈ ಸಂದರ್ಭದಲ್ಲಿ ಮಂಜುನಾಥ್ ತನ್ನ ಬಳಿಯಿದ್ದ ತಲವಾರನ್ನು ಸಾರ್ವಜನಿಕವಾಗಿ ಪ್ರದರ್ಶಿಸಿ ಭೀತಿ ಮೂಡಿಸಿದ್ದಾನೆ ಎಂದು ತಿಳಿದುಬಂದಿದೆ.ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಉಪ್ಪಿನಂಗಡಿ ಪೊಲೀಸರು ಮಂಜುನಾಥ್ ಹಾಗೂ ವಿಶ್ವನಾಥನನ್ನು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ವಿಚಾರಣೆ ನಡೆಸಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಿದ್ದಾರೆ.









