ಪುತ್ತೂರು: ಮೈಸೂರು ವಿಜಯ ದಶಮಿ ಕಂಬಳದಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ ಅವರು ಶ್ರೀ ದೇವರ ಪ್ರಸಾದ ನೀಡಿ ಗೌರವಿಸಿದರು.ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಶಾಸಕ ಅಶೋಕ್ ಕುಮಾರ್ ರೈ ಅವರ ಮೂಲಕ ಸರ್ಕಾರದಿಂದ ಹೆಚ್ಚಿನ ಅನುದಾನ ಒದಗಿಸಿರುವ ಹಿನ್ನೆಲೆಯಲ್ಲಿ, ಈಶ್ವರ ಭಟ್ ಪಂಜಿಗುಡ್ಡೆ ಅವರು ಕಂಬಳದ ವೇದಿಕೆಯಲ್ಲಿ ಮುಖ್ಯಮಂತ್ರಿಗೆ ಶ್ರೀ ದೇವರ ಪ್ರಸಾದ ಹಾಗೂ ಮಹಾಲಿಂಗೇಶ್ವರ ದೇವರ ಫೋಟೋ ನೀಡಿ ಗೌರವಿಸಿದರು.ಈ ಸಂದರ್ಭದಲ್ಲಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ, ಕಂಬಳ ಸಮಿತಿ ರಾಜ್ಯಾಧ್ಯಕ್ಷ ದೇವಿಪ್ರಸಾದ್ ಶೆಟ್ಟಿ, ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಈಶ್ವರ ಬೆಡೇಕರ್, ಸುಭಾಶ್ ರೈ ಬೆಳ್ಳಿಪ್ಪಾಡಿ, ಉದ್ಯಮಿ ಸುದೇಶ್ ಚಿಕ್ಕಪುತ್ತೂರು, ಗೋಪಾಲಕೃಷ್ಣ ನಡುಬೈಲುಗುತ್ತು, ಲೋಕೇಶ್ ಪಡ್ಡಾಯೂರು, ರೋಹನ್ ರಾಜ್ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

Join WhatsApp Group
error: Content is protected !!