ಪುತ್ತೂರು: 92ನೇ ವರ್ಷದ ನವರಾತ್ರಿ ಉತ್ಸವ ಹಾಗೂ ಪುತ್ತೂರು ದಸರಾ ಅಂಗವಾಗಿ ಪುತ್ತೂರು ಶ್ರೀ ಶಾರದಾ ಭಜನಾ ಮಂದಿರದಲ್ಲಿ ಲೋಕಕಲ್ಯಾಣಾರ್ಥವಾಗಿ ಅ. 18ರಂದು ಸಾಮೂಹಿಕ ಚಂಡಿಕಾಹೋಮ ನಡೆಯಿತು.ಕೆಮ್ಮಿಂಜೆ ಕಾರ್ತಿಕ್ ತಂತ್ರಿಯವರ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಬೆಳಿಗ್ಗೆ ಪ್ರಾರ್ಥನೆಯೊಂದಿಗೆ ಆರಂಭಗೊಂಡ ಕಾರ್ಯಕ್ರಮದಲ್ಲಿ ಮಧ್ಯಾಹ್ನ ಚಂಡಿಕಾಹೋಮದ ಪೂರ್ಣಾಹುತಿ ನೆರವೇರಿತು. ಬಳಿಕ ಮಹಾಪೂಜೆ, ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನಡೆಯಿತು.ಅನ್ನಸಂತರ್ಪಣೆಯಲ್ಲಿ ಸುಮಾರು 2,200 ಮಂದಿ ಭಕ್ತಾದಿಗಳು ಭಾಗವಹಿಸಿ ಅನ್ನಪ್ರಸಾದ ಸ್ವೀಕರಿಸಿದರು.









