ಬಂಟ್ವಾಳ: ಅಮ್ಟಾಡಿ ಗ್ರಾಮದ ಎರ್ಮುಡೆ ಎಂಬಲ್ಲಿ ಹಣವನ್ನು ಪಣವಾಗಿಟ್ಟು ಕೋಳಿ ಅಂಕದ ಜೂಜಾಟ ನಡೆಸುತ್ತಿದ್ದ ಸ್ಥಳಕ್ಕೆ ಬಂಟ್ವಾಳ ನಗರ ಪೊಲೀಸರು ಅ.18ರಂದು ಸಂಜೆ ದಾಳಿ ನಡೆಸಿದ್ದು, ಓರ್ವನನ್ನು ವಶಕ್ಕೆ ಪಡೆದಿದ್ದಾರೆ.ಕೋಳಿ ಅಂಕದ ಜೂಜಾಟ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಬಂಟ್ವಾಳ ನಗರ ಪೊಲೀಸ್ ಠಾಣೆಯ ಉಪನಿರೀಕ್ಷಕ ಸಂದೀಪ್ ಕುಮಾರ್ ಶೆಟ್ಟಿ ಅವರು ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ತೆರಳಿ ದಾಳಿ ನಡೆಸಿದರು. ಈ ವೇಳೆ ಜೂಜಾಟದಲ್ಲಿ ತೊಡಗಿದ್ದವರು ಪರಾರಿಯಾಗಿದ್ದು, ಬಂಟ್ವಾಳ ಬಿ ಮೂಡ ಗ್ರಾಮದ ಗಣೇಶ್ (33) ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ.ಸ್ಥಳದಲ್ಲಿದ್ದ 12 ಅಂಕದ ಕೋಳಿಗಳು, ಕೋಳಿ ಅಂಕಕ್ಕೆ ಬಳಸುವ ಕತ್ತಿ ಹಾಗೂ ₹1,100 ನಗದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!