ಮಂಗಳೂರು: ವೈದ್ಯಕೀಯ ಪ್ರಯೋಗಾಲಯ ಕ್ಷೇತ್ರದಲ್ಲಿ ಗುಣಮಟ್ಟದ ಸೇವೆ ಹಾಗೂ ನಿಖರ ವರದಿಗಳ ಮೂಲಕ ವಿಶ್ವಾಸ ಗಳಿಸಿರುವ ಪುತ್ತೂರಿನ ಧನ್ವಂತರಿ ಕ್ಲಿನಿಕಲ್ ಲ್ಯಾಬೊರೇಟರಿಯ 11ನೇ ಶಾಖೆ ಮಂಗಳೂರಿನ ಬಂಟ್ಸ್ ಹಾಸ್ಟೆಲ್ ವೃತ್ತದ ಎಸ್ಸೆಲ್ ಟವರ್ಸ್‌ನಲ್ಲಿ ಅ.19ರಂದು ಶುಭಾರಂಭಗೊಂಡಿತು.
ನೂತನ ಶಾಖೆಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಫರೀದ್ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಧನ್ವಂತರಿ ಕ್ಲಿನಿಕಲ್ ಲ್ಯಾಬೊರೇಟರಿ ತನ್ನ ಉತ್ತಮ ಸೇವೆಯ ಮೂಲಕ ವೈದ್ಯಕೀಯ ಕ್ಷೇತ್ರದಲ್ಲಿ ವಿಶ್ವಾಸಾರ್ಹತೆ ಗಳಿಸಿದೆ. ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಚೇತನ್ ಪ್ರಕಾಶ್ ಕಜೆ ಅವರ ನಾಯಕತ್ವದಲ್ಲಿ ಮಂಗಳೂರಿನಲ್ಲಿ ಹೊಸ ಶಾಖೆ ಆರಂಭಿಸಿರುವುದು ಸಂತೋಷದ ವಿಚಾರ. ರೋಗ ಬಂದ ಬಳಿಕ ಚಿಕಿತ್ಸೆ ಪಡೆಯುವುದಕ್ಕಿಂತ, ರೋಗ ಬಾರದಂತೆ ಮುನ್ನೆಚ್ಚರಿಕೆ ವಹಿಸುವುದು ಹಾಗೂ ಆರಂಭಿಕ ಹಂತದಲ್ಲೇ ರೋಗವನ್ನು ಪತ್ತೆಹಚ್ಚುವುದು ಮುಖ್ಯ. ಈ ನಿಟ್ಟಿನಲ್ಲಿ ಗುಣಮಟ್ಟದ ವೈದ್ಯಕೀಯ ಪ್ರಯೋಗಾಲಯಗಳ ಪಾತ್ರ ಮಹತ್ವದ್ದಾಗಿದೆ ಎಂದು ಹೇಳಿದರು. ಸಂಸ್ಥೆಯ ಮುಂದಿನ ಬೆಳವಣಿಗೆಗೆ ಶುಭ ಹಾರೈಸಿದರು.
ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ.ವೈ. ಭರತ್ ಶೆಟ್ಟಿ ಮಾತನಾಡಿ, ವೈದ್ಯಕೀಯ ಕ್ಷೇತ್ರದಲ್ಲಿ ಸೂಕ್ತ ಚಿಕಿತ್ಸೆ ನೀಡಲು ನಿಖರವಾದ ರೋಗನಿರ್ಣಯ ಅತ್ಯಗತ್ಯ. ಇದಕ್ಕಾಗಿ ವಿಶ್ವಾಸಾರ್ಹ ಪ್ರಯೋಗಾಲಯಗಳ ಅಗತ್ಯವಿದೆ. ಮಂಗಳೂರು ಆರೋಗ್ಯ ಕ್ಷೇತ್ರದ ಪ್ರಮುಖ ಕೇಂದ್ರವಾಗಿ ಬೆಳೆಯುತ್ತಿದ್ದು, ಹೊರ ಜಿಲ್ಲೆ ಹಾಗೂ ಹೊರ ರಾಜ್ಯಗಳಿಂದಲೂ ಜನರು ಚಿಕಿತ್ಸೆಗಾಗಿ ಇಲ್ಲಿಗೆ ಬರುತ್ತಿದ್ದಾರೆ. ಈ ಸಂದರ್ಭದಲ್ಲಿ ಗುಣಮಟ್ಟದ ಪ್ರಯೋಗಾಲಯ ಸೇವೆಗಳು ಅತ್ಯಗತ್ಯ. ಧನ್ವಂತರಿ ಲ್ಯಾಬೊರೇಟರಿ ತನ್ನ ಸೇವೆಯ ಮೂಲಕ ಉತ್ತಮ ಹೆಸರು ಗಳಿಸಿದ್ದು, ನೂತನ ಶಾಖೆಯಿಂದ ಮಂಗಳೂರು ನಗರ ಹಾಗೂ ಜಿಲ್ಲೆಯ ಜನರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಹೇಳಿದರು.
ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಚೇತನ್ ಪ್ರಕಾಶ್ ಕಜೆ ಅತಿಥಿಗಳನ್ನು ಸ್ವಾಗತಿಸಿ, ಧನ್ವಂತರಿ ಕ್ಲಿನಿಕಲ್ ಲ್ಯಾಬೊರೇಟರಿಯಲ್ಲಿ ಲಭ್ಯವಿರುವ ಅತ್ಯಾಧುನಿಕ ತಂತ್ರಜ್ಞಾನ ಹಾಗೂ ವಿಶೇಷ ಸೇವೆಗಳ ಕುರಿತು ಮಾಹಿತಿ ನೀಡಿದರು. ದಕ್ಷಿಣ ಕರ್ನಾಟಕದಲ್ಲಿ ಮೊದಲ ಬಾರಿಗೆ ಅಲೆಕ್ಸ್ ಮೆಷಿನ್ ಅಳವಡಿಸಿರುವುದಾಗಿ ತಿಳಿಸಲಾಯಿತು.
ಕಾರ್ಯಕ್ರಮದಲ್ಲಿ ತುಳು ಚಿತ್ರರಂಗದ ಹಾಸ್ಯ ನಟ ಅರವಿಂದ ಬೋಳಾರ್, ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಸೋಮಯಾಜಿ ಎಸ್ಟೇಟ್ಸ್ ಪ್ರೈವೇಟ್ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕ ಬಿ.ಆರ್. ಸೋಮಯಾಜಿ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಹಮ್ಮದ್ ಕುಕ್ಕುವಳ್ಳಿ, ನಿರೂಪಕ ವಿಜೆ ವಿಖ್ಯಾತ್,ಅಬ್ದುಲ್ ಫಾವಾಜ್, ಡಾ. ಚಂದ್ರಶೇಖರ್ ಕಜೆ, ಜಾನಕಿ, ಡಾ. ಪ್ರಸನ್ನಾ ಚೇತನ್, ಜೀವಿತಾ, ಆಯುಷ್ಮಾನ್, ಡಾ. ಕೀರ್ತನ್ ಕಜೆ ಮತ್ತಿತರರು ಉಪಸ್ಥಿತರಿದ್ದರು. ಆಶಿಕ್ ಕುಟ್ಟಿ ಕಾರ್ಯಕ್ರಮ ನಿರೂಪಿಸಿದರು.









