ಮಂಗಳೂರು: ಬೋಳಿಯಾರಿನ ರಂತಡ್ಕ ಕ್ರಾಸ್ ಸಮೀಪ ಜಗಳದ ಬಳಿಕ ಸ್ಕೂಟರ್‌ನಲ್ಲಿ ತೆರಳುತ್ತಿದ್ದ ಇಬ್ಬರು ಯುವಕರಿಗೆ ಪಿಕಪ್ ವಾಹನದಿಂದ ಡಿಕ್ಕಿ ಹೊಡೆದು ಕೊಲೆ ಮಾಡಿರುವುದಾಗಿ ಆರೋಪಿಸಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಘಟನೆಯಲ್ಲಿ ಮೊಹಮ್ಮದ್ ಝುನೈದ್ (23) ಮತ್ತು ಮೊಹಮ್ಮದ್ ಅಫ್ರಾಜ್ (23) ಮೃತಪಟ್ಟಿ

ಪೊಲೀಸರಿಗೆ ನೀಡಿದ ದೂರಿನ ಪ್ರಕಾರ, ಅ.19ರಂದು ಸಂಜೆ ರಂತಡ್ಕ ಕ್ರಾಸ್ ಬಳಿ ಯಾವುದೋ ವಿಚಾರಕ್ಕೆ ಸಂಬಂಧಿಸಿ ಝುನೈದ್, ಅಫ್ರಾಜ್ ಮತ್ತು ಪಿಕಪ್ ಚಾಲಕ ಹಫೀಜ್ ಅಲಿಯಾಸ್ ಅಪ್ಪಿ ನಡುವೆ ಮಾತಿನ ಚಕಮಕಿ ನಡೆದು, ಬಳಿಕ ಹೊಡೆದಾಟವಾಗಿತ್ತು ಎನ್ನಲಾಗಿದೆ.ಬಳಿಕ ಝುನೈದ್ ಮತ್ತು ಅಫ್ರಾಜ್ ಸ್ಕೂಟರ್‌ನಲ್ಲಿ ಮುಡಿಪು ಕಡೆಗೆ ತೆರಳುತ್ತಿದ್ದಾಗ, ಪಿಕಪ್ ವಾಹನದಲ್ಲಿ ಹಿಂಬಾಲಿಸಿಕೊಂಡು ಬಂದ ಚಾಲಕ ಸ್ಕೂಟರ್‌ಗೆ ರಭಸವಾಗಿ ಡಿಕ್ಕಿ ಹೊಡೆದಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಡಿಕ್ಕಿಯ ರಭಸಕ್ಕೆ ಸ್ಕೂಟರ್ ಜಖಂಗೊಂಡಿದ್ದು, ಸಮೀಪದ ವಿದ್ಯುತ್ ಕಂಬವೂ ತುಂಡಾಗಿ ಬಿದ್ದಿತ್ತು ಎನ್ನಲಾಗಿದೆ.ಗಂಭೀರವಾಗಿ ಗಾಯಗೊಂಡಿದ್ದ ಝುನೈದ್ ಅವರನ್ನು ಕಣಚೂರು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ, ಸಂಜೆ 6.55ಕ್ಕೆ ಅವರು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದರು. ಅಫ್ರಾಜ್ ಅವರನ್ನು ಕೆ.ಎಸ್. ಹೆಗ್ಡೆ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರೂ ಮೃತಪಟ್ಟಿದ್ದಾರೆ.ಘಟನೆಯ ಬಳಿಕ ಪಿಕಪ್ ವಾಹನವನ್ನು ಸ್ಥಳದಲ್ಲೇ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಮೃತ ಝುನೈದ್ ಅವರ ತಂದೆ ನೀಡಿದ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!