ಪುತ್ತೂರು: ಕೋಡಿಂಬಾಡಿಯ ಅಕ್ಕರೆ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ (ನಿ.)ಯ ಉದ್ಘಾಟನಾ ಸಮಾರಂಭ ಅ. 21ರಂದು ಬುಧವಾರ ಬೆಳಿಗ್ಗೆ 10.43ಕ್ಕೆ ಕೋಡಿಂಬಾಡಿಯ ಶಿವ ಕಾಂಪ್ಲೆಕ್ಸ್‌ನಲ್ಲಿ ನಡೆಯಲಿದೆ.ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಕೆ.ಎಸ್. ಅವರು ಸೊಸೈಟಿಯನ್ನು ಉದ್ಘಾಟಿಸಲಿದ್ದು, ಮಂಗಳೂರು ಜಿಲ್ಲಾ ಸಹಕಾರಿ ಬ್ಯಾಂಕ್‌ನ ನಿರ್ದೇಶಕ ಭಾಸ್ಕರ್ ಎಸ್. ಕೋಟ್ಯಾನ್ ಅವರು ದೀಪ ಪ್ರಜ್ವಲನೆ ನೆರವೇರಿಸಲಿದ್ದಾರೆ.ಅಜಿತ್ ಕೆ.ಆರ್. ಪೂಜಾರಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟು ಅವರು ಸಭಾ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.ಕೋಟಿ ಚೆನ್ನಯ ಜೋಡುಕರೆ ಕಂಬಳ ಸಮಿತಿ ಪುತ್ತೂರಿನ ಅಧ್ಯಕ್ಷ ಚಂದ್ರಹಾಸ ಶೆಟ್ಟಿ ಎನ್. ಅವರು ಭದ್ರತಾ ಕೊಠಡಿಯನ್ನು ಉದ್ಘಾಟಿಸಲಿದ್ದು, ರೈ ಎಸ್ಟೇಟ್ ಆ್ಯಂಡ್ ಬಿಲ್ಡರ್ಸ್ ಮಂಗಳೂರಿನ ಮಾಲಕಿ ಸುಮಾ ಅಶೋಕ್ ರೈ ಅವರು ನಗದು ಪತ್ರ ವಿತರಣೆ ನೆರವೇರಿಸಲಿದ್ದಾರೆ.ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳ ಗಣ್ಯರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಸೊಸೈಟಿಯ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.









