ಬೆಳ್ತಂಗಡಿ: ಕೊಕ್ಕಡ ಗ್ರಾಮದ ಸೌತಡ್ಕ ದೇವಸ್ಥಾನಕ್ಕೆ ಮೀಸಲಿಟ್ಟ ಜಮೀನಿನಲ್ಲಿ ಸಂಬಂಧಪಟ್ಟ ಇಲಾಖೆಗಳ ಅನುಮತಿ ಪಡೆಯದೆ ಹಾಗೂ ಅಧಿಕೃತ ದಾಖಲೆಗಳಿಲ್ಲದೆ ಅಕ್ರಮವಾಗಿ ಕಟ್ಟಡ ನಿರ್ಮಿಸಿ ಬಾಡಿಗೆಗೆ ನೀಡಿರುವ ಆರೋಪದ ಕುರಿತು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ಸೌತಡ್ಕ ದೇವಸ್ಥಾನದ ಆಡಳಿತ ಮಂಡಳಿಯ ಪದಾಧಿಕಾರಿಯಾಗಿರುವ ಸುಬ್ರಹ್ಮಣ್ಯ ಶಬರಾಯ ಅವರು ನೀಡಿದ ದೂರಿನಂತೆ, ಈ ಹಿಂದೆ ದೇವಸ್ಥಾನದ ಪದಾಧಿಕಾರಿಯಾಗಿದ್ದ ಕೊಕ್ಕಡ ನಿವಾಸಿ ಕೃಷ್ಣ ಭಟ್ ಎಂಬವರು ದೇವಸ್ಥಾನದ ಸಮೀಪದಲ್ಲಿರುವ ದೇವಸ್ಥಾನಕ್ಕೆ ಕಾಯ್ದಿರಿಸಿದ ಜಮೀನಿನಲ್ಲಿ ಅಕ್ರಮವಾಗಿ ಕಟ್ಟಡ ನಿರ್ಮಿಸಿ ಬಾಡಿಗೆಗೆ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.ಸದರಿ ಕಟ್ಟಡದಲ್ಲಿ ಅಂಗಡಿಗಳನ್ನು ಬಾಡಿಗೆಗೆ ಪಡೆದವರಿಂದ ಸಾರ್ವಜನಿಕ ಶಾಂತಿಗೆ ಭಂಗ ಉಂಟಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಈ ಸಂಬಂಧ ಅ. 19ರಂದು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ಅರ್ಜಿ ಸಂಖ್ಯೆ 354/2026ರಂತೆ ದೂರು ದಾಖಲಾಗಿದ್ದು, ಪೊಲೀಸರು ವಿಚಾರಣೆ ನಡೆಸಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಿದ್ದಾರೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.









