ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಶಾಲೆಗಳಿಗೆ ಘೋಷಿಸಲಾಗಿದ್ದ ದಸರಾ ರಜೆಯನ್ನು ಒಂದು ದಿನ ವಿಸ್ತರಿಸಿ ಅಕ್ಟೋಬರ್ 22ರವರೆಗೆ ಮುಂದುವರಿಸಲಾಗಿದೆ.ಈ ಹಿಂದೆ ಅಕ್ಟೋಬರ್ 3ರಿಂದ ಅಕ್ಟೋಬರ್ 21ರವರೆಗೆ ದಸರಾ ರಜೆ ಘೋಷಿಸಲಾಗಿತ್ತು. ಅಕ್ಟೋಬರ್ 21ರಂದು ದಸರಾ ಹಬ್ಬದ ಪೂಜೆ ಹಾಗೂ ಮೆರವಣಿಗೆಯ ಅಂತಿಮ ದಿನವಾಗಿದ್ದು, ರಾತ್ರಿ ವೇಳೆ ನಡೆಯುವ ಕಾರ್ಯಕ್ರಮಗಳಲ್ಲಿ ಮಕ್ಕಳು ಹಾಗೂ ಪೋಷಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ. ದೂರದ ಜಿಲ್ಲೆಗಳಿಗೆ ತೆರಳಿರುವವರು ಮರಳಿ ಬರುವುದು ತಡವಾಗುವ ಸಾಧ್ಯತೆ ಇರುವುದರಿಂದ ಮರುದಿನವೇ ಶಾಲೆಗೆ ಹಾಜರಾಗಲು ಮಕ್ಕಳಿಗೆ ತೊಂದರೆಯಾಗಲಿದೆ ಎಂದು ಪೋಷಕರು, ಸಾರ್ವಜನಿಕರು ಹಾಗೂ ಜನಪ್ರತಿನಿಧಿಗಳು ರಜೆ ವಿಸ್ತರಿಸುವಂತೆ ಮನವಿ ಮಾಡಿದ್ದರು.ಈ ಮನವಿಯನ್ನು ಪರಿಶೀಲಿಸಿ, ಜಿಲ್ಲಾಡಳಿತದೊಂದಿಗೆ ಸಮಾಲೋಚಿಸಿದ ಬಳಿಕ ಸಂಬಂಧಪಟ್ಟ ಅಧಿಕಾರಿಗಳು ಅಕ್ಟೋಬರ್ 22ರವರೆಗೆ ದಸರಾ ರಜೆ ವಿಸ್ತರಿಸಿ ಆದೇಶ ಹೊರಡಿಸಿದ್ದಾರೆ.

Leave a Reply

Your email address will not be published. Required fields are marked *

Join WhatsApp Group
error: Content is protected !!