ನೆಲ್ಯಾಡಿ: ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿ ಕರ್ಬಸಂಕದ ಬಳಿ ಗುರುವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 16 ವರ್ಷದ ವಿದ್ಯಾರ್ಥಿಯೊಬ್ಬರು ಮೃತಪಟ್ಟಿದ್ದಾರೆ.ಮೃತರನ್ನು ನೆಲ್ಯಾಡಿಯಲ್ಲಿ ಫ್ಲವರ್ಸ್ ಹೋಟೆಲ್ ನಡೆಸುತ್ತಿರುವ ಜೋಜೋ ಟಿ. ಜಾರ್ಜ್ ಅವರ ಪುತ್ರ, ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿ ಆಲ್ವಿನ್ ಜೋಜೋ ಜಾರ್ಜ್ (16) ಎಂದು ಗುರುತಿಸಲಾಗಿದೆ.ಗುರುವಾರ ಮುಂಜಾನೆ ಸುಮಾರು 1 ಗಂಟೆಗೆ ಕರ್ಬಸಂಕದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಲ್ಲಿಸಲಾಗಿದ್ದ ಗ್ಯಾಸ್ ಟ್ಯಾಂಕರ್‌ಗೆ ಕಾರು ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ತೀವ್ರತೆಗೆ ಕಾರಿನಲ್ಲಿದ್ದ ಆಲ್ವಿನ್ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.ಘಟನೆಯ ಮಾಹಿತಿ ತಿಳಿದ ತಕ್ಷಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಪುತ್ತೂರಿನ ಸರ್ಕಾರಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!