ಬಂಟ್ವಾಳ: ಸುಮಾರು ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯೊಬ್ಬನನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ 2007ರಲ್ಲಿ ದಾಖಲಾಗಿದ್ದ ಅ.ಕ್ರ. 139/2007ರ ಐಪಿಸಿ ಕಲಂ 366, 368, 420, 120 ಮತ್ತು 149ರ ಅಡಿಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಂಟ್ವಾಳದ ಮಂಚಿ ನಿವಾಸಿ ಇರ್ಷಾದ್ ಅಲಿಯಾಸ್ ಮೊಹಮ್ಮದ್ ಇರ್ಷಾದ್ ಬಂಧಿತ ಆರೋಪಿ.ಆರೋಪಿಯು ಕಳೆದ ಸುಮಾರು ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದನು. ಈತನನ್ನು ಅ.21ರಂದು ಬಂಟ್ವಾಳ ನಗರ ಪೊಲೀಸ್ ಠಾಣೆಯ ಎಎಸ್‌ಐ ಸುಜು ಹಾಗೂ ಸಿಬ್ಬಂದಿಗಳಾದ ಜಗದೀಶ್ ಮತ್ತು ಮಂಜುನಾಥ್ ಅವರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.ಈ ವೇಳೆ ಆರೋಪಿಯ ಪಾಸ್‌ಪೋರ್ಟ್‌ ವಶಕ್ಕೆ ಪಡೆಯಲಾಗಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!