ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಉಪನಿರ್ದೇಶಕರ ಕಚೇರಿ (ಆಡಳಿತ), ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು ಹಾಗೂ ದರ್ಬೆಯ ಸಂತ ಫಿಲೋಮಿನಾ ಅನುದಾನಿತ ಪ್ರೌಢಶಾಲೆಯ ಸಹಯೋಗದಲ್ಲಿ ಪುತ್ತೂರು ತಾಲೂಕು ಮಟ್ಟದ 14 ಮತ್ತು 17ರ ವಯೋಮಾನದ ಕ್ರೀಡೋತ್ಸವ ಅ.23 ಮತ್ತು 24ರಂದು ನಡೆಯಲಿದೆ.ದರ್ಬೆಯ ಫಿಲೋನಗರದಲ್ಲಿರುವ ಸಂತ ಫಿಲೋಮಿನಾ ಕ್ರೀಡಾಂಗಣದಲ್ಲಿ ಬೆಳಿಗ್ಗೆ 9.30ಕ್ಕೆ ಕ್ರೀಡೋತ್ಸವಕ್ಕೆ ಚಾಲನೆ ದೊರೆಯಲಿದೆ.ಮಾಯ್ ದೆ ದೇವುಸ್ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ಅತೀ ವಂ. ಡಾ. ಜೆ.ಬಿ. ಸಲ್ದಾನ್ಹಾ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಹಾಗೂ ಸದಸ್ಯ ಜಯಕುಮಾರ್ ರೈ, ಪುತ್ತೂರು ದೈಹಿಕ ಶಿಕ್ಷಣ ಪರಿವೀಕ್ಷಕಿ ಸಿಲ್ವಿಯಾ ಆರ್. ಕ್ಯಾಸ್ತಲಿನೊ, ಕ್ಷೇತ್ರ ಶಿಕ್ಷಣಾಧಿಕಾರಿ ಸುರೇಶ್ ಡಿ., ರಕ್ಷಕ-ಶಿಕ್ಷಕ ಸಂಘದ ಉಪಾಧ್ಯಕ್ಷ ಹಾಗೂ ಸದಸ್ಯ ಬಾಬು ಮರಿಕೆ, ಶಾಲಾ ಮುಖ್ಯೋಪಾಧ್ಯಾಯ ವಂ. ಮ್ಯಾಕ್ಸಿಮ್ ಡಿ’ಸೋಜಾ ಮತ್ತಿತರರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Leave a Reply

Your email address will not be published. Required fields are marked *

Join WhatsApp Group
error: Content is protected !!