:ಬೆಂಗಳೂರು ಸ್ಟಿಂಗ್ ಆಪರೇಷನ್ ಪ್ರಕರಣದಲ್ಲಿ ಕಾಂಗ್ರೆಸ್ ಪಕ್ಷದವರು ಭಾಗಿಯಾಗಿರುವುದು ಪುರಾವೆಗಳ ಮೂಲಕ ಸಾಬೀತಾದರೆ, ಅವರಿಗೆ ಶೋಕಾಸ್ ನೋಟಿಸ್ ನೀಡಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ತಿಳಿಸಿದ್ದಾರೆ.ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ಮಾತನಾಡಿದ ಅವರು, ಸ್ಟಿಂಗ್ ಪ್ರಕರಣದ ಕುರಿತು ಯತೀಂದ್ರ ಸಿದ್ದರಾಮಯ್ಯ ಮಾಡಿರುವ ಆರೋಪಗಳಿಗೆ ಪ್ರತಿಕ್ರಿಯಿಸಿದರು.ರಾಜಕೀಯವಾಗಿ ಸೇಡು ತೀರಿಸಿಕೊಳ್ಳುವ ಉದ್ದೇಶದಿಂದ ಇಂತಹ ಕೃತ್ಯಗಳನ್ನು ನಡೆಸುವುದು ಸರಿಯಲ್ಲ ಎಂದು ತಾನು ನಿರಂತರವಾಗಿ ಹೇಳುತ್ತಾ ಬಂದಿದ್ದೇನೆ. ಸ್ಟಿಂಗ್ ಆಪರೇಷನ್‌ನಲ್ಲಿ ಕಾಂಗ್ರೆಸ್‌ನವರು ಭಾಗಿಯಾಗಿರುವ ಬಗ್ಗೆ ವಿಡಿಯೊಗಳು ಹೊರಬಂದಿದ್ದು, ಈಗಾಗಲೇ ಅವರಿಗೆ ಶೋಕಾಸ್ ನೋಟಿಸ್ ನೀಡುವಂತೆ ಸೂಚಿಸಲಾಗಿದೆ. ತನಿಖೆಯ ಬಳಿಕ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.

Leave a Reply

Your email address will not be published. Required fields are marked *

Join WhatsApp Group
error: Content is protected !!