ಮೈಸೂರು:ತಮ್ಮ ವಿರುದ್ಧ ನಡೆದಿರುವ ವಿವಾದಿತ ರಹಸ್ಯ ಕಾರ್ಯಾಚರಣೆ ಕುರಿತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮೌನ ಮುರಿದಿದ್ದು, ಇದು ತಮ್ಮನ್ನು ಬ್ಲಾಕ್‌ಮೇಲ್ ಮಾಡಲು ರೂಪಿಸಿದ ವ್ಯವಸ್ಥಿತ ಷಡ್ಯಂತ್ರ ಎಂದು ಆರೋಪಿಸಿದ್ದಾರೆ.ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸುಳ್ಳು ಆರೋಪಗಳ ಮೂಲಕ ಅಪಪ್ರಚಾರ ಮಾಡುವುದನ್ನು ತಡೆಯಲು ನ್ಯಾಯಾಲಯದಿಂದ ಆದೇಶ ತಂದಿದ್ದೇನೆ ಎಂದು ತಿಳಿಸಿದರು.ಈ ವರ್ಷದ ಸೆಪ್ಟೆಂಬರ್‌ನಲ್ಲಿ ಈ ವಿಚಾರ ತಮ್ಮ ಗಮನಕ್ಕೆ ಬಂದಿತು. ಒಬ್ಬ ಪತ್ರಕರ್ತ ಮತ್ತು ಮಂಗಳೂರಿನ ಕೃಪಾ ಆಳ್ವಾ ಸೇರಿಕೊಂಡು ಈ ಕಾರ್ಯಾಚರಣೆ ನಡೆಸಿದ್ದಾರೆ ಎಂದು ಆರೋಪಿಸಿದ ಅವರು, ಜನರಿಗೆ ಸತ್ಯಾಂಶ ತಿಳಿಯಬೇಕು ಎಂಬ ಉದ್ದೇಶದಿಂದ ತಾವೇ ಸ್ವಯಂಪ್ರೇರಿತವಾಗಿ ಪೊಲೀಸರಿಗೆ ದೂರು ನೀಡಿದ್ದಾಗಿ ಹೇಳಿದರು.“ಈ ಆರೋಪಗಳಲ್ಲಿ ಯಾವುದೇ ಹುರುಳಿಲ್ಲ. ಇವು ಸಂಪೂರ್ಣ ಸತ್ಯಕ್ಕೆ ದೂರವಾದ ಆರೋಪಗಳು. ನಾನು ಎಂಟು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಇಂತಹ ಯಾವುದೇ ಕೃತ್ಯಗಳು ನಡೆದಿರಲಿಲ್ಲ. ನನ್ನ ಸುದೀರ್ಘ ರಾಜಕೀಯ ಜೀವನದಲ್ಲಿ ಈ ರೀತಿಯ ಕೀಳು ಆರೋಪಗಳನ್ನು ಎದುರಿಸಿರಲಿಲ್ಲ” ಎಂದು ಸಿದ್ದರಾಮಯ್ಯ ತಿಳಿಸಿದರು.ಪ್ರಸ್ತುತ ರಾಜಕೀಯ ವ್ಯವಸ್ಥೆಯಲ್ಲಿ ಬ್ಲಾಕ್‌ಮೇಲ್ ಮಾಡುವ ತಂತ್ರಗಳನ್ನು ಅನುಸರಿಸಲಾಗುತ್ತಿದೆ ಎಂದು ಆರೋಪಿಸಿದ ಅವರು, “ನಾನು ಯಾವುದೇ ತಪ್ಪು ಮಾಡಿಲ್ಲ. ತಪ್ಪು ಮಾಡದಿರುವಾಗ ನನಗೆ ಯಾರ ನೈತಿಕ ಬೆಂಬಲವೂ ಬೇಕಾಗಿಲ್ಲ. ಯಾರೂ ನನ್ನ ಪರವಾಗಿ ನಿಲ್ಲಬೇಕಾದ ಅಗತ್ಯವೂ ಇಲ್ಲ” ಎಂದು ಸ್ಪಷ್ಟಪಡಿಸಿದರು.

Leave a Reply

Your email address will not be published. Required fields are marked *

Join WhatsApp Group
error: Content is protected !!