ಸುರತ್ಕಲ್: ಶಾಲಾ ಬಸ್‌ಗೆ ಖಾಸಗಿ ಟೂರಿಸ್ಟ್ ಬಸ್ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ 13 ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಶುಕ್ರವಾರ ಸಂಜೆ ಕೊಲ್ನಾಡಿನ ಸುಂದರ ರಾಮ್ ಶೆಟ್ಟಿ ಕನ್ವೆನ್‌ಷನ್ ಹಾಲ್ ಎದುರಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.ಕುಳಾಯಿಯ ರಾಯನ್ ಇಂಟರ್‌ನ್ಯಾಷನಲ್ ಶಾಲೆಗೆ ಸೇರಿದ ಬಸ್‌ನಲ್ಲಿ 16 ವಿದ್ಯಾರ್ಥಿಗಳಿದ್ದರು. ಶಾಲಾ ಬಸ್ ಅನ್ನು ಹೆದ್ದಾರಿ ಬದಿಯಲ್ಲಿ ನಿಲ್ಲಿಸಿ ವಿದ್ಯಾರ್ಥಿಗಳನ್ನು ಇಳಿಸುತ್ತಿದ್ದ ವೇಳೆ, ಅತಿವೇಗ ಹಾಗೂ ಅಜಾಗರೂಕತೆಯಿಂದ ಬಂದ ಖಾಸಗಿ ಟೂರಿಸ್ಟ್ ಬಸ್ ಹಿಂದಿನಿಂದ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.ಡಿಕ್ಕಿಯ ರಭಸಕ್ಕೆ ಶಾಲಾ ಬಸ್ ರಸ್ತೆಯ ಬದಿಯಲ್ಲಿದ್ದ ಹೊಂಡಕ್ಕೆ ಬಿದ್ದಿದ್ದು, ಅದರಲ್ಲಿದ್ದ 13 ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯರು ಹಾಗೂ ಸಾರ್ವಜನಿಕರು ತಕ್ಷಣವೇ ಮುಕ್ಕದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ

Leave a Reply

Your email address will not be published. Required fields are marked *

Join WhatsApp Group
error: Content is protected !!