ಉಡುಪಿ: ವಿಮಾ ಹಣ ಕೊಡಿಸುವುದಾಗಿ ನಂಬಿಸಿ ವೃದ್ಧೆಯೊಬ್ಬರ ಚಿನ್ನದ ಸರ ಕದ್ದು ಪರಾರಿಯಾಗಿದ್ದ ಆರೋಪಿಯನ್ನು ಹಿರಿಯಡಕ ಪೊಲೀಸರು ಬಂಧಿಸಿದ್ದಾರೆ.ಬಂಧಿತನನ್ನು ಉಡುಪಿಯ ಸುಬ್ರಹ್ಮಣ್ಯ ನಗರದ ನಿವಾಸಿ, ಹೋಮ್ ನರ್ಸ್ ಆಗಿ ಕೆಲಸ ಮಾಡುತ್ತಿದ್ದ ಉಮೇಶ್ ಶೆಟ್ಟಿ (45) ಎಂದು ಗುರುತಿಸಲಾಗಿದೆ.

ಘಟನೆಯ ವಿವರ:ಕುಕ್ಕೆಹಳ್ಳಿ ಗ್ರಾಮದ ಬಡಪಾಲು ನಿವಾಸಿ ಬಾಬಿ ಹಾಂಡ್ತಿ ಎಂಬ ವೃದ್ಧೆಯ ಮನೆಗೆ ಸೆ. 13ರಂದು ಬಂದಿದ್ದ ಆರೋಪಿ, ಅವರ ಮಗ ಮೃತಪಟ್ಟಿದ್ದು, ವಿಮಾ ಹಣ ಕೊಡಿಸುವುದಾಗಿ ನಂಬಿಸಿದ್ದ. ಬಳಿಕ ಅದೇ ದಿನ ಮಧ್ಯಾಹ್ನ ಮತ್ತೆ ಮನೆಗೆ ಬಂದ ಆರೋಪಿ, ಮಾತಿನಲ್ಲಿ ತೊಡಗಿಸಿ ವೃದ್ಧೆ ಧರಿಸಿದ್ದ ಎರಡು ಪವನ್ ತೂಕದ ಚಿನ್ನದ ಸರವನ್ನು ಕದ್ದು ಪರಾರಿಯಾಗಿದ್ದ.ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಹಿರಿಯಡಕ ಪೊಲೀಸರು, ಅ. 23ರಂದು ಆರೋಪಿಯನ್ನು ಆತನ ಮನೆಯ ಸಮೀಪ ಬಂಧಿಸಿದ್ದಾರೆ. ಆರೋಪಿಯಿಂದ ₹1.85 ಲಕ್ಷ ಮೌಲ್ಯದ ಕಳವುಗೈದ ಚಿನ್ನಾಭರಣ ಹಾಗೂ ಕೃತ್ಯಕ್ಕೆ ಬಳಸಿದ್ದ ಬೈಕ್‌ ಅನ್ನು ವಶಪಡಿಸಿಕೊಳ್ಳಲಾಗಿದೆ.ಬಂಧಿತ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!