ಬೆಳ್ತಂಗಡಿ: ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ 59ನೇ ವರ್ಧಂತ್ಯುತ್ಸವದ ಸಂದರ್ಭದಲ್ಲಿ ಬೆಳ್ತಂಗಡಿ ವಕೀಲರ ಸಂಘದ ಪದಾಧಿಕಾರಿಗಳು ಹಾಗೂ ಹಿರಿಯ ನ್ಯಾಯವಾದಿಗಳು ಅವರನ್ನು ಭೇಟಿ ಮಾಡಿ ಶುಭಾಶಯ ಕೋರಿದರು.ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷ ಅಲೋಸಿಸ್ ಎಸ್. ಲೋಬೊ, ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಎಂ., ನಿಕಟಪೂರ್ವ ಅಧ್ಯಕ್ಷ ವಸಂತ ಮರಕಡ, ಹಿರಿಯ ನ್ಯಾಯವಾದಿ ಬಿ.ಕೆ. ಧನಂಜಯ ರಾವ್ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ವಕೀಲರ ಸಂಘದ ನಿಕಟಪೂರ್ವ ಪ್ರಧಾನ ಕಾರ್ಯದರ್ಶಿ ಮತ್ತು ಜಂಟಿ ಕಾರ್ಯದರ್ಶಿ ನವೀನ್ ಬಿ.ಕೆ. ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದು, ಪೂಜ್ಯ ಹೆಗ್ಗಡೆಯವರಿಗೆ ಶುಭ ಹಾರೈಸಿದರು.ಇದೇ ಸಂದರ್ಭದಲ್ಲಿ ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗಾಗಿ ನಡೆಯುತ್ತಿರುವ ಹೋರಾಟದ ಮುಂದಿನ ರೂಪುರೇಷೆಗಳ ಬಗ್ಗೆಯೂ ಡಾ. ವೀರೇಂದ್ರ ಹೆಗ್ಗಡೆಯವರಿಗೆ ಮಾಹಿತಿ ನೀಡಲಾಯಿತು.

Leave a Reply

Your email address will not be published. Required fields are marked *

Join WhatsApp Group
error: Content is protected !!