ಮಂಗಳೂರು: ಕೊಲೆಯಂತಹ ಗಂಭೀರ ಆರೋಪ ಹೊರಿಸಿ ಹಣ ಹಾಗೂ ಆಸ್ತಿ ಸುಲಿಗೆ ಮಾಡಲು ಸಂಚು ರೂಪಿಸಿ, ಕುಟುಂಬದ ಗೌರವಕ್ಕೆ ಧಕ್ಕೆ ತಂದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ಉರ್ವಾ ಪೊಲೀಸರು ಬಂಧಿಸಿದ್ದಾರೆ.ಮಾಯ ಅನ್ನಾಮೇರಿ ರೇಗೋ ಅವರು ನೀಡಿದ ದೂರಿನ ಮೇರೆಗೆ ಉರ್ವಾ ಪೊಲೀಸ್ ಠಾಣೆಯಲ್ಲಿ ಆ. 10ರಂದು ಪ್ರಕರಣ ದಾಖಲಾಗಿತ್ತು.ಪ್ರಕರಣದ ತನಿಖೆ ಮುಂದುವರಿಸಿದ ಪೊಲೀಸರು, ಸಾಕ್ಷ್ಯಾಧಾರಗಳ ಆಧಾರದ ಮೇಲೆ ಅ. 23ರಂದು ಗಾನಮಜಲ್, ಪದವು, ಶಕ್ತಿನಗರ ನಿವಾಸಿ ನವೀನ್ ಥೋರೆಸ್ (42) ಎಂಬಾತನನ್ನು ಬಂಧಿಸಿದ್ದಾರೆ. ಬಳಿಕ ಅ. 24ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.ಪ್ರಕರಣದಲ್ಲಿ ಭಾಗಿಯಾಗಿರುವ ಇತರ ಆರೋಪಿಗಳ ಕುರಿತು ಕೂಲಂಕಷ ತನಿಖೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.









