ಪುತ್ತೂರು: ದರ್ಬೆಯ ಸಂತ ಫಿಲೋಮಿನಾ ಪ್ರೌಢಶಾಲೆಯಲ್ಲಿ ಅ. 23 ಮತ್ತು 24ರಂದು ನಡೆದ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಪುತ್ತೂರಿನ ಡಾ. ಶಿವರಾಮ ಕಾರಂತ ಹೈಸ್ಕೂಲ್ನ 9ನೇ ತರಗತಿ ವಿದ್ಯಾರ್ಥಿನಿ ತಶ್ರೀಫಾ ಅವರು ಉದ್ದ ಜಿಗಿತದಲ್ಲಿ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.ಇದೇ ಕ್ರೀಡಾಕೂಟದ ತ್ರಿವಿಧ ಜಿಗಿತ ಸ್ಪರ್ಧೆಯಲ್ಲಿ ತಶ್ರೀಫಾ ತೃತೀಯ ಸ್ಥಾನ ಗಳಿಸಿ ಶಾಲೆಗೆ ಕೀರ್ತಿ ತಂದಿದ್ದಾರೆ.ವಿದ್ಯಾರ್ಥಿನಿಯ ಸಾಧನೆಗೆ ಶಾಲೆಯ ಮುಖ್ಯಶಿಕ್ಷಕರು, ದೈಹಿಕ ಶಿಕ್ಷಣ ಶಿಕ್ಷಕಿ ಪ್ರಮೀಳಾ, ಶಿಕ್ಷಕ ವೃಂದ ಹಾಗೂ ಪೋಷಕರು ಅಭಿನಂದನೆ ಸಲ್ಲಿಸಿದ್ದಾರೆ.









