ಬೆಂಗಳೂರು: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರಿಗೆ ತೀವ್ರ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬೆಂಗಳೂರಿನ ವೈದೇಹಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಹಠಾತ್ ಆರೋಗ್ಯದಲ್ಲಿ ಏರುಪೇರಾದ ಕಾರಣ ಕುಟುಂಬಸ್ಥರು ಹಾಗೂ ಭದ್ರತಾ ಸಿಬ್ಬಂದಿ ಅವರನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಪರಮೇಶ್ವರ್ ಆಸ್ಪತ್ರೆಗೆ ದಾಖಲಾದ ಸುದ್ದಿ ತಿಳಿಯುತ್ತಿದ್ದಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.ವೈದೇಹಿ ಆಸ್ಪತ್ರೆಯ ಹಿರಿಯ ವೈದ್ಯರ ತಂಡ ಪರಮೇಶ್ವರ್ ಅವರ ಆರೋಗ್ಯ ತಪಾಸಣೆ ನಡೆಸುತ್ತಿದ್ದು, ರಕ್ತ ಪರೀಕ್ಷೆ, ಇಸಿಜಿ ಸೇರಿದಂತೆ ವಿವಿಧ ವೈದ್ಯಕೀಯ ಪರೀಕ್ಷೆಗಳನ್ನು ಕೈಗೊಂಡಿದೆ ಎಂದು ವರದಿಯಾಗಿದೆ.ಸದ್ಯ ಅವರಿಗೆ ವೈದ್ಯಕೀಯ ನಿಗಾದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಆರೋಗ್ಯ ಸ್ಥಿತಿಯ ಕುರಿತು ವೈದ್ಯರ ತಂಡ ನಿರಂತರವಾಗಿ ಮೇಲ್ವಿಚಾರಣೆ ನಡೆಸುತ್ತಿದೆ.









