ಪುತ್ತೂರು: ಅ.29ರಂದು ವಿದ್ಯುತ್ ಮಾರ್ಗದ ನಿರ್ವಹಣೆ ಹಾಗೂ ಉಪಕೇಂದ್ರದ ದುರಸ್ತಿ ಕಾಮಗಾರಿ ನಡೆಯಲಿರುವ ಹಿನ್ನೆಲೆಯಲ್ಲಿ ಪುತ್ತೂರು, ಕಡಬ, ಉಪ್ಪಿನಂಗಡಿ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.ಪುತ್ತೂರು–ಕಡಬ–ಸುಬ್ರಹ್ಮಣ್ಯ ವಿದ್ಯುತ್ ಮಾರ್ಗದ ನಿರ್ವಹಣೆ ಹಾಗೂ ಉಪಕೇಂದ್ರದ ದುರಸ್ತಿ ಕಾಮಗಾರಿ ಹಿನ್ನೆಲೆಯಲ್ಲಿ ಕಡಬ 33/11 ಕೆ.ವಿ. ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲಾ 11 ಕೆ.ವಿ. ಫೀಡರ್‌ಗಳಲ್ಲಿ ಅ.29ರಂದು ಬೆಳಗ್ಗೆ 10ರಿಂದ ಸಂಜೆ 5.30ರವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.ಅದೇ ರೀತಿ, ತುರ್ತು ಕಾಮಗಾರಿ ನಿಮಿತ್ತ ಪುತ್ತೂರು 110/33/11 ಕೆ.ವಿ. ವಿದ್ಯುತ್ ಉಪಕೇಂದ್ರದಿಂದ ಹೊರಡುವ ಕಾಂಚನ ಫೀಡರ್ ಹಾಗೂ ಕರಾಯ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಉಪ್ಪಿನಂಗಡಿ ಟೌನ್ ಮತ್ತು ಕೆಮ್ಮಾರ ಫೀಡರ್‌ಗಳಲ್ಲಿ ಅಂದು ಬೆಳಗ್ಗೆ 10ರಿಂದ ಸಂಜೆ 5ರವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳ್ಳಲಿದೆ.ಈ ಅವಧಿಯಲ್ಲಿ ಪೆರಿಯಡ್ಕ, ಗೋಕುಲನಗರ, ಕೆಮ್ಮಾರ, ಉಪ್ಪಿನಂಗಡಿ, ಬಜತ್ತೂರು ಸೇರಿದಂತೆ ಸಂಬಂಧಪಟ್ಟ ಫೀಡರ್‌ಗಳ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಮನವಿ ಮಾಡಿದೆ.









