ಕಾಪು ಹಾಗೂ ಮಟ್ಟು ಬೀಚ್‌ಗಳಿಗೆ ಆಗಮಿಸುವ ಪ್ರವಾಸಿಗರಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಕಾಪು ಪೊಲೀಸರು ಬಂಧಿಸಿದ್ದು, ಆರೋಪಿಗಳಿಂದ 5.710 ಕೆ.ಜಿ. ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.

ಬಂಧಿತರನ್ನು ಬೆಳಪು ಗ್ರಾಮದ ವಿನಯನಗರ ನಿವಾಸಿ ಆರೀಫ್ (38) ಹಾಗೂ ಉಡುಪಿ ತಾಲೂಕಿನ ಪಡುತೋನ್ಸೆ ಗ್ರಾಮದ ಹೂಡೆಯ ಕೆಮ್ಮಣ್ಣು ನಿವಾಸಿ ಅಕೀಫ್ (34) ಎಂದು ಗುರುತಿಸಲಾಗಿದೆ.

ಅ.27ರಂದು ಕಾಪು ವೃತ್ತ ನಿರೀಕ್ಷಕ ಅಜ್ಮತ್ ಅಲಿ ಅವರಿಗೆ ದೊರೆತ ಖಚಿತ ಮಾಹಿತಿಯ ಮೇರೆಗೆ ಉಳಿಯಾರಗೋಳಿ ಗ್ರಾಮದ ಯಾರ್ಡ್ ಬೀಚ್‌ನಲ್ಲಿ ಪೊಲೀಸರು ದಾಳಿ ನಡೆಸಿದರು. ಈ ವೇಳೆ ಆರೋಪಿಗಳು ತಮ್ಮ ಸ್ವಂತ ಲಾಭಕ್ಕಾಗಿ ಮಾರಾಟ ಮಾಡುವ ಉದ್ದೇಶದಿಂದ ಗಾಂಜಾವನ್ನು ಹೊಂದಿರುವುದು ಪತ್ತೆಯಾಗಿದೆ.ಆರೋಪಿಗಳಿಂದ ಸುಮಾರು 2.85 ಲಕ್ಷ ರೂ. ಮೌಲ್ಯದ 5.710 ಕೆ.ಜಿ. ಗಾಂಜಾ, 225ರೂ. ನಗದು ಹಾಗೂ ಎರಡು ಮೊಬೈಲ್ ಫೋನ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಆರೋಪಿಗಳು ಆಂಧ್ರಪ್ರದೇಶದ ಹೈದರಾಬಾದ್‌ನಿಂದ ಗಾಂಜಾವನ್ನು ತಂದು ಮಾರಾಟ ಮಾಡುತ್ತಿರುವುದಾಗಿ ವಿಚಾರಣೆ ವೇಳೆ ಹೇಳಿದ್ದಾರೆ ಪೊಲೀಸರು ತಿಳಿಸಿದ್ದಾರೆ. ಅಲ್ಲದೆ, ಆರೋಪಿಗಳ ವಿರುದ್ಧ ಈಗಾಗಲೇ ವಿವಿಧ ಪೊಲೀಸ್ ಠಾಣೆಗಳಲ್ಲಿ ಕ್ರಿಮಿನಲ್ ಪ್ರಕರಣಗಳಿರುವುದಾಗಿ ಮಾಹಿತಿ ನೀಡಿದ್ದಾರೆ.ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಕಾರ್ಕಳ ಉಪವಿಭಾಗದ ಎಎಸ್ಪಿ ಈಶಿತಾ ಗುಪ್ತಾ ಹಾಗೂ ಕಾಪು ವೃತ್ತ ನಿರೀಕ್ಷಕ ಅಜ್ಮತ್ ಆಲಿ ಅವರ ಮಾರ್ಗದರ್ಶನದಲ್ಲಿ ಕಾಪು ಪೊಲೀಸ್ ಠಾಣೆಯ ಪಿಎಸ್‌ಐ ತೇಜಸ್ವಿ ನೇತೃತ್ವದಲ್ಲಿ ಕಾಪು ಠಾಣೆಯ ಪೊಲೀಸ್ ಸಿಬ್ಬಂದಿ, ಕಾರ್ಕಳ ಉಪವಿಭಾಗದ ಆಯಂಟಿ ಎನ್‌ಡಿಪಿಎಸ್ ಸ್ಕ್ವಾಡ್, ಸಿಡಿಆರ್ ತಾಂತ್ರಿಕ ವಿಭಾಗದ ಸಿಬ್ಬಂದಿ ಹಾಗೂ ಎಸ್‌ಒಸಿಒ ಅಧಿಕಾರಿಗಳು ಈ ಕಾರ್ಯಾಚರಣೆ ನಡೆಸಿದ್ದಾರೆ

Leave a Reply

Your email address will not be published. Required fields are marked *

Join WhatsApp Group
error: Content is protected !!