ಪುತ್ತೂರು: ಮಾಯ್ ದೆ ದೇವುಸ್ ಸಮೂಹ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕರಾದ ಮೊನ್ಸಿಂಜ್ಞೋರ್ ಆಂಟನಿ ಪತ್ರಾವೋ ಅವರ ಸ್ಮರಣಾರ್ಥ ಸಂಸ್ಥೆಯ ವಾರ್ಷಿಕ ಕ್ರೀಡಾಕೂಟ ಅ.30 ಮತ್ತು 31ರಂದು ಸಂತ ಫಿಲೋಮಿನಾ ಕಾಲೇಜು ಮೈದಾನದಲ್ಲಿ ನಡೆಯಲಿದೆ.
ಅ.30ರಂದು ಉದ್ಘಾಟನೆ:
ಅ.30ರಂದು ಬೆಳಿಗ್ಗೆ 9.15ಕ್ಕೆ ನಡೆಯಲಿರುವ ಕ್ರೀಡಾಕೂಟವನ್ನು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಪುತ್ತೂರು ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗೀಸ್, ಕ್ಷೇತ್ರ ಶಿಕ್ಷಣಾಧಿಕಾರಿ ಸುರೇಶ್ ಡಿ. ಹಾಗೂ ಸಂತ ಫಿಲೋಮಿನಾ ಕಾಲೇಜಿನ ಹಿರಿಯ ವಿದ್ಯಾರ್ಥಿ, ಪ್ರೊ ಕಬಡ್ಡಿ ಆಟಗಾರ ಪ್ರಶಾಂತ್ ಕುಮಾರ್ ರೈ ಭಾಗವಹಿಸಲಿದ್ದಾರೆ.ಮಾಯ್ ದೆ ದೇವುಸ್ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ವಂ| ಡಾ. ಜಾನ್ ಬ್ಯಾಪ್ಟಿಸ್ಟ್ ಸಲ್ಲನ್ಹಾ ಅಧ್ಯಕ್ಷತೆ ವಹಿಸಲಿದ್ದಾರೆ.ಮಾಯ್ ದೆ ದೇವುಸ್ ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷ ರೋಶನ್ ಲಸ್ರಾದೋ, ಸಂತ ಫಿಲೋಮಿನಾ (ಸ್ವಾಯತ್ತ) ಕಾಲೇಜಿನ ಪ್ರಾಂಶುಪಾಲ ವಂ| ಡಾ. ಆಂಟನಿ ಪ್ರಕಾಶ್ ಮೊಂತೆರೊ, ಸಂತ ಫಿಲೋಮಿನಾ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ವಂ| ಅಶೋಕ್ ರಾಯನ್ ಕ್ರಾಸ್ತಾ, ಸಂತ ಫಿಲೋಮಿನಾ ಅನುದಾನಿತ ಪ್ರೌಢಶಾಲೆಯ ಮುಖ್ಯಶಿಕ್ಷಕ ವಂ| ಮ್ಯಾಕ್ಸಿಮ್ ಡಿಸೋಜ ಎಂ., ಸಂತ ವಿಕ್ಟರ್ ಬಾಲಕಿಯರ ಪ್ರೌಢಶಾಲೆಯ ಮುಖ್ಯಶಿಕ್ಷಕಿ ರೊಸಲಿನ್ ಲೋಬೊ, ಸಂತ ಫಿಲೋಮಿನಾ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯಶಿಕ್ಷಕಿ ಸಿಸ್ಟರ್ ಲೋರಾ ಪಾಯಸ್, ಸಂತ ವಿಕ್ಟರ್ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯಶಿಕ್ಷಕ ಹ್ಯಾರಿ ಡಿಸೋಜ, ಮಾಯ್ ದೆ ದೇವುಸ್ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕಿ ಜಾನೆಟ್ ಡಿಸೋಜ ಹಾಗೂ ಸಂತ ಫಿಲೋಮಿನಾ ಮಹಿಳಾ ವಸತಿನಿಲಯದ ವಾರ್ಡನ್ ಸಿಸ್ಟರ್ ಮಟಿಲ್ಲಾ ಲೋಬೋ ಗೌರವ ಉಪಸ್ಥಿತರಿರಲಿದ್ದಾರೆ.
ಅ.31ರಂದು ಸಮಾರೋಪ
ಅ.31ರಂದು ಸಂಜೆ 3.30ಕ್ಕೆ ಕ್ರೀಡಾಕೂಟದ ಸಮಾರೋಪ ಸಮಾರಂಭ ನಡೆಯಲಿದ್ದು, ಮಾಯ್ ದೆ ದೇವುಸ್ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ವಂ| ಡಾ. ಜಾನ್ ಬ್ಯಾಪ್ಟಿಸ್ಟ್ ಸಲ್ಲನ್ಹಾ ಅಧ್ಯಕ್ಷತೆ ವಹಿಸಲಿದ್ದಾರೆ. ಶಾಲಾ ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕ ವಾಲ್ಟರ್ ಡಿಮೆಲ್ಲೋ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.ಈ ಕುರಿತು ಶಿಕ್ಷಣ ಸಂಸ್ಥೆಗಳ ಸಂಚಾಲಕರು, ಆಡಳಿತ ಮಂಡಳಿ, ಶಾಲಾ-ಕಾಲೇಜುಗಳ ಮುಖ್ಯಸ್ಥರು, ರಕ್ಷಕ-ಶಿಕ್ಷಕ ಸಂಘ, ಹಿರಿಯ ವಿದ್ಯಾರ್ಥಿ ಸಂಘ, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿ ಬಳಗ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.









