ಪುತ್ತೂರು: ದೀಪಾವಳಿ ಹಬ್ಬದ ಪ್ರಯುಕ್ತ ಶಾಸಕ ಅಶೋಕ್ ರೈ ಅವರ ರೈ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಆಯೋಜಿಸಲಾಗುತ್ತಿರುವ ‘ಅಶೋಕ ಜನಮನ’ ಕಾರ್ಯಕ್ರಮದ ಅಂಗವಾಗಿ ಆರ್ಯಾಪು (ಮರಿಕೆ) ಗ್ರಾಮದ ಎಸ್‌ಎಸ್‌ಟಿ ಕಾಲನಿಯಲ್ಲಿ ಗ್ರಾಮ ಭೇಟಿ ಹಾಗೂ ಪ್ರಚಾರ ಸಭೆ ನಡೆಯಿತು.ಈ ಸಂದರ್ಭದಲ್ಲಿ ಮಾತನಾಡಿದ ಟ್ರಸ್ಟ್‌ನ ನಿಹಾಲ್ ಪಿ. ಶೆಟ್ಟಿ, “ದೀಪಾವಳಿಯ ಸಂತೋಷವನ್ನು ಸಮಾಜದ ಪ್ರತಿಯೊಂದು ಕುಟುಂಬದೊಂದಿಗೆ ಹಂಚಿಕೊಳ್ಳುವ ಸದುದ್ದೇಶದಿಂದ ಅಶೋಕ ಜನಮನ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಜನರೊಂದಿಗೆ ಆತ್ಮೀಯ ಸಂಬಂಧ ಬೆಸೆಯುವ ಹಾಗೂ ಸಮಾಜದಲ್ಲಿ ಪ್ರೀತಿ, ವಿಶ್ವಾಸ ಮತ್ತು ಒಗ್ಗಟ್ಟನ್ನು ಬಲಪಡಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ.ಅಶೋಕ ಜನಮನ ಎನ್ನುವುದು ಕೇವಲ ಸೀರೆ ಮತ್ತು ತಟ್ಟೆಗಳನ್ನು ವಿತರಿಸುವ ಕಾರ್ಯಕ್ರಮವಲ್ಲ. ಪ್ರತಿಯೊಂದು ಕುಟುಂಬದೊಂದಿಗೆ ಸಂತೋಷ ಹಂಚಿಕೊಳ್ಳುವ ಹಾಗೂ ಜನರ ಪ್ರೀತಿ, ವಿಶ್ವಾಸಕ್ಕೆ ಗೌರವ ನೀಡುವ ಆತ್ಮೀಯ ಪ್ರಯತ್ನವಾಗಿದೆ. ದೀಪಾವಳಿಯ ಬೆಳಕು ಪ್ರತಿಯೊಂದು ಮನೆಯಲ್ಲೂ ಸಂತೋಷ ಮೂಡಿಸಲಿ ಎಂಬುದು ನಮ್ಮ ಆಶಯ” ಎಂದು ಹೇಳಿದರು.

ಈ ಸಂದರ್ಭದಲ್ಲಿ ಗ್ರಾಮದ ಜನರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿ, ಮುಂಬರುವ ಅಶೋಕ ಜನಮನ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಲಾಯಿತು.ಈ ವೇಳೆ ಮಹಾಲಿಂಗೇಶ್ವರ ದೇವಸ್ಥಾನದ ಟ್ರಸ್ಟ್ ಸದಸ್ಯ ಮಹಾಬಲ ರೈ, ರೈ ಚಾರಿಟೇಬಲ್ ಟ್ರಸ್ಟ್ ಸದಸ್ಯ ದಾಮೋದರ ಬಂಡಾರ್ಕರ್, ಬಾಬು ಮರಿಕೆ, ಸದಾನಂದ ಶೆಟ್ಟಿ, ಗಿರೀಶ್ ರೈ, ಶುಭಾ ರೈ ಸೇರಿದಂತೆ ಗ್ರಾಮದ ಪ್ರಮುಖರು ಹಾಗೂ ಗಣ್ಯರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

Join WhatsApp Group
error: Content is protected !!