ಬೆಂಗಳೂರು: ರಾಜ್ಯ ಕಾಂಗ್ರೆಸ್ ಮುಖಂಡರನ್ನು ಗುರಿಯಾಗಿಸಿಕೊಂಡು ನಡೆಸಲಾಗಿದೆ ಎನ್ನಲಾದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ, ಪಕ್ಷದ ಮಾಜಿ ಪ್ರಧಾನ ಕಾರ್ಯದರ್ಶಿ ಕೃಪಾ ಆಳ್ವ ಅವರನ್ನು ಕಾಂಗ್ರೆಸ್‌ನಿಂದ ಆರು ವರ್ಷಗಳ ಕಾಲ ಉಚ್ಚಾಟಿಸಲಾಗಿದೆ.ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷ ಎಂ. ನಾರಾಯಣಸ್ವಾಮಿ ಅವರು ಅ.27ರಂದು ಉಚ್ಚಾಟನೆ ಆದೇಶ ಹೊರಡಿಸಿದ್ದಾರೆ.ಸ್ಟಿಂಗ್ ಆಪರೇಷನ್ ಪ್ರಕರಣದ ಕುರಿತು ಮಾಧ್ಯಮಗಳಲ್ಲಿ ನಕಾರಾತ್ಮಕ ಪ್ರಚಾರ ಹಾಗೂ ಪ್ರತಿಕ್ರಿಯೆಗಳು ವ್ಯಕ್ತವಾಗಿ ಪಕ್ಷಕ್ಕೆ ಮುಜುಗರ ಉಂಟಾಗಿತ್ತು. ಈ ಪ್ರಕರಣದಲ್ಲಿ ಕೃಪಾ ಆಳ್ವ ಅವರು ಭಾಗಿಯಾಗಿದ್ದಾರೆಂಬ ಆರೋಪದ ಹಿನ್ನೆಲೆಯಲ್ಲಿ ಕೆಪಿಸಿಸಿ ವತಿಯಿಂದ ಕಾರಣ ಕೇಳಿ ನೋಟಿಸ್ ನೀಡಲಾಗಿತ್ತು.

ಆದರೆ, ನೋಟಿಸ್‌ಗೆ ಇದುವರೆಗೆ ಯಾವುದೇ ಉತ್ತರ ಅಥವಾ ಸಮಜಾಯಿಷಿ ನೀಡದ ಹಿನ್ನೆಲೆಯಲ್ಲಿ ಹಾಗೂ ಅವರ ನಡವಳಿಕೆಯನ್ನು ಪಕ್ಷ ವಿರೋಧಿ ಚಟುವಟಿಕೆ ಎಂದು ಪರಿಗಣಿಸಿ, ಕೆಪಿಸಿಸಿ ಅಧ್ಯಕ್ಷರ ಸೂಚನೆಯ ಮೇರೆಗೆ ತಕ್ಷಣದಿಂದ ಜಾರಿಗೆ ಬರುವಂತೆ ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.ಈ ಆದೇಶದ ಪ್ರತಿಯನ್ನು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಿಗೂ ರವಾನಿಸಲಾಗಿದೆ.

Leave a Reply

Your email address will not be published. Required fields are marked *

Join WhatsApp Group
error: Content is protected !!