ಪುತ್ತೂರು: ಪುತ್ತೂರಿನ ಪಾಂಗ್ಳಾಯಿ ದರ್ಬೆಯ ಬೆಥನಿ ಆಂಗ್ಲ ಮಾಧ್ಯಮ ಶಾಲೆಯ ಬಾಲಕ ಹಾಗೂ ಬಾಲಕಿಯರ ತಂಡಗಳು ವಲಯ ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿವೆ.ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು ಹಾಗೂ ಸರಕಾರಿ ಪದವಿಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ), ಕೊಂಬೆಟ್ಟು ಇವರ ಸಂಯುಕ್ತ ಆಶ್ರಯದಲ್ಲಿ ಇತ್ತೀಚೆಗೆ ನಡೆದ 17 ವರ್ಷ ವಯೋಮಾನದ ಬಾಲಕ-ಬಾಲಕಿಯರ ವಲಯ ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ಬೆಥನಿ ಶಾಲೆಯ ಎರಡೂ ತಂಡಗಳು ಅತ್ಯುತ್ತಮ ಪ್ರದರ್ಶನ ನೀಡಿ ಪ್ರಶಸ್ತಿ ತಮ್ಮದಾಗಿಸಿಕೊಂಡಿವೆ.ವಿದ್ಯಾರ್ಥಿಗಳ ಈ ಸಾಧನೆಗೆ ಶಾಲಾ ಪ್ರಾಂಶುಪಾಲರಾದ ಭಗಿನಿ ಅನಿತಾ ಅವರ ಮಾರ್ಗದರ್ಶನ ಹಾಗೂ ದೈಹಿಕ ಶಿಕ್ಷಣ ಶಿಕ್ಷಕರಾದ ಹರೀಶ್, ನಿರಂಜನ್ ಮತ್ತು ಅಕ್ಷಯ್ ಅವರ ತರಬೇತಿ ಪ್ರಮುಖ ಕಾರಣವಾಗಿದೆ.
ವಿದ್ಯಾರ್ಥಿಗಳ ಸಾಧನೆಗೆ ಶಾಲಾ ಸಂಚಾಲಕರು, ಪ್ರಾಂಶುಪಾಲರು, ಆಡಳಿತ ಮಂಡಳಿ, ಪೋಷಕರು, ಶಿಕ್ಷಕರು ಹಾಗೂ ವಿದ್ಯಾರ್ಥಿ ವೃಂದ ಅಭಿನಂದನೆ ಸಲ್ಲಿಸಿದ್ದಾರೆ.









